ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು: ದಕ್ಷಿಣ ಕನ್ನಡದ 5 ಶಾಲೆ, 1 ಪಿಯು ಕಾಲೇಜು ಸ್ಥಗಿತ - Mahanayaka
1:11 AM Wednesday 11 - December 2024

ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು: ದಕ್ಷಿಣ ಕನ್ನಡದ 5 ಶಾಲೆ, 1 ಪಿಯು ಕಾಲೇಜು ಸ್ಥಗಿತ

school
21/01/2022

ಮಂಗಳೂರು: ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ನಾಲ್ಕು ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ ಬಗ್ಗೆ ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಗ್ರೆ ಕಸಬದ ಸರ್ಕಾರಿ ಪ್ರೌಢಶಾಲೆ, ಡೊಂಗರಕೇರಿಯ ಕೆನರಾ ಸಿಬಿಎಸ್‌ ಇ ಶಾಲೆ, ಬಜ್ಪೆಯ ಅನ್ಸರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮೂಲ್ಕಿಯ ವ್ಯಾಸ ಮಹರ್ಷಿ ಆಂಗ್ಲ ಮಾಧ್ಯಮಿಕ ಪ್ರೌಢಶಾಲೆ ಮೂಲ್ಕಿ, ಸರ್ಕಾರಿ ಪ್ರೌಢಶಾಲೆ ಮುಚ್ಚೂರು ಮತ್ತು ಎಡಪದವು ವಿವೇಕಾನಂದ ಪಿಯುಸಿ ಕಾಲೇಜನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದೀಗ 5 ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವಕನನ್ನು ನಗ್ನಗೊಳಿಸಿ ಹಲ್ಲೆ: ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ

ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರೋಪಿ ಸೆರೆ

ಉತ್ತರ ಪ್ರದೇಶ: ತಮ್ಮದೇ ಕ್ಷೇತ್ರದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು

ಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯುವಕನ ಪತ್ತೆಗೆ ಪಿಎಲ್‌ಎ ನೆರವು ಕೋರಿದ ಭಾರತೀಯ ಸೇನೆ

ಇತ್ತೀಚಿನ ಸುದ್ದಿ