ದಕ್ಷಿಣ ಕನ್ನಡ: 10 ಅಡಿ ಕಂದಕಕ್ಕೆ ಉರುಳಿ ಬಿದ್ದ ಬೈಕ್: ಸವಾರ ದಾರುಣ ಸಾವು
ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಮಾರು 10 ಅಡಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.
ಯಶೋಧರ ಮೃತಪಟ್ಟ ಯುವಕ. ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಎಂಬುವವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಇವರಿಬ್ಬರೂ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ದೈವ ಕೋಲ ಕಾರ್ಯಕ್ರಮಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಇವರು ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬಿ.ಸಿ. ರೋಡ್ ಸಮೀಪದ ಕೆಎಸ್ಸಾರ್ಟಿಸಿ ಬಸ್ ಡಿಪೋ ದ ಬಳಿ ತಲಪಾಡಿಯಲ್ಲಿ ರಸ್ತೆ ಬದಿಯ ಸುಮಾರು ಹತ್ತು ಅಡಿ ಆಳಕ್ಕೆ ಬೈಕ್ ಬಿದ್ದಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಯಶೋಧರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw