ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಕಾರ್ಮಿಕನಿಗೆ ಮಾರಣಾಂತಿಕ ಹಲ್ಲೆ

mangalore crime news
16/12/2022

ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಾರೆ ಕೆಲಸದ ಕಾರ್ಮಿಕರೊಬ್ಬರ ಮೇಲೆ ಮೂವರು  ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಯಿ ಸಮೀಪದ ಕುದ್ಕೋಳಿ ಎಂಬಲ್ಲಿ ನಡೆದಿದೆ.

ಇಸಾಕ್ (43) ಹಲ್ಲೆಗೊಳಗಾದವರು. ಬಿ.ಸಿ.ರೋಡ್‌ನಿಂದ ಮೂಡುಬಿದಿರೆ ಗಂಟಾಲ್‌ಕಟ್ಟೆ ಎಂಬಲ್ಲಿಗೆ ಕೆಲಸಕ್ಕೆ ಹೋಗಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇಸಾಕ್ ಅವರ ಬಳಿ, ಸೀಟ್ ದೊರೆಯದೆ ನಿಂತುಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಬ್ಯಾಗ್ ಹಿಡಿದುಕೊಳ್ಳಲು ಕೊಟ್ಟಿದ್ದಾಳೆ. ಇದನ್ನು ಪ್ರಶ್ನಿಸಿದ ಬಸ್ ‌ನಲ್ಲಿದ್ದ ಇನ್ನೊಬ್ಬ ವ್ಯಕ್ತಿಯು, ‘ನೀನು ಹುಡುಗಿಯರಿಗೆ ತೊಂದರೆ ಕೊಡುತ್ತೀಯಾ’ ಎಂದು ಪ್ರಶ್ನಿಸಿ, ಬಸ್‌ನಿಂದ ಕೆಳಗೆ ಇಳಿಸಿ, ಇತರ ಇಬ್ಬರೊಂದಿಗೆ ಸೇರಿ ರಿಕ್ಷಾದಲ್ಲಿ ಇಸಾಕ್‌ನನ್ನು ಕರೆದುಕೊಂಡು ಹೋಗಿದ್ದಾರೆ.

ರಾಯಿ ಸಮೀಪ ಮರದ ಕೆಳಗೆ ರಿಕ್ಷಾ ನಿಲ್ಲಿಸಿ, ಇಸಾಕ್‌ ಬೆನ್ನು, ಹೊಟ್ಟೆ, ಭುಜಕ್ಕೆ ಕೋಲಿನಿಂದ ಹೊಡೆದಿದ್ದಾರೆ. ಜನರು ಸೇರಿದ್ದನ್ನು ಕಂಡು ಈ ಮೂವರು ಓಡಿ ಹೋಗಿದ್ದಾರೆ. ಗಾಯಾಳು ಪ್ರಸ್ತುತ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಸಾಕ್‌ ಮೇಲೆ ಅಪರಿಚಿತ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿವರಿಸಲಾಗಿದೆ. ಈ ಪ್ರಕರಣ ಭಾರೀ ವಿವಾದ ಆಗ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮನೋಹರ್, ಚೇತನ್ ಹಾಗೂ ಕಿಶೋರ್ ಎಂದು ಗುರುತಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version