ಗುಡುಗು ಸಹಿತ ಭಾರೀ ಮಳೆ: ದಕ್ಷಿಣ ಕನ್ನಡದ ವಿವಿಧೆಡೆ ಶಾಲೆಗಳಿಗೆ ರಜೆ
ಮಂಗಳೂರು: ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯ ಹಾಗೂ ಜಿಲ್ಲೆಯ ವಿವಿಧ ಕಡೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಉಳ್ಳಾಲ, ಮುಲ್ಕಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಮಳೆಗೆ ನಗರದ ಪಂಪ್ ವೆಲ್, ಕೊಟ್ಟಾರ ಚೌಕಿ, ಮಾಲೇಮಾರು ಸೇರಿದಂತೆ ಸಾಕಷ್ಟು ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಇಂದು ಮುಂಜಾನೆಯೇ ಮಂಗಳೂರು, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮನವಿಯಂತೆ ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ಕ್ಕೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka