ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ: ಇನ್ನೆರಡು ದಿನ ಏನೇನು ಇರಲಿದೆ?
ಮಂಗಳೂರು: ಕೇರಳದಲ್ಲಿ ಕೊರೊನಾ ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಈ ಕರ್ಪ್ಯೂ ಅವಧಿಯಲ್ಲಿ ಮಧ್ಯಾಹ್ನ 2ರವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಅವಧಿಯಲ್ಲಿ ವಸ್ತುಗಳನ್ನು ಖರೀದಿಸಬಹುದು. ಅನಗತ್ಯವಾಗಿ ತಿರುಗಾಡುವಂತಿಲ್ಲ ಎಂದು ಹೇಳಿದ್ದಾರೆ.
ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಇನ್ನು ಶನಿವಾರ ನಡೆಸಲು ಉದ್ದೇಶಿಸಿರುವ ಮಂಗಳೂರು ವಿವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ರವಿವಾರ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಮೇಕೆದಾಟಿಸಲಾಗದೇ ನೆಹರೂ, ಇಂದಿರಾ ಗಾಂಧಿ ಹೆಸರು ಎಳೆದು ತಂದರೇ ಸಿ.ಟಿ.ರವಿ?
ತಾಯಿಯ ಕಣ್ಣೆದುರೇ ಇಬ್ಬರು ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ದುಷ್ಟರು!
ಮುಸ್ಲಿಮ್ ಕಲಾವಿದರಿಂದ ಮೆಹೆಂದಿ ಹಚ್ಚಿಸಿಕೊಳ್ಳಬಾರದು | ಮೆಹೆಂದಿ ಸ್ಟಾಲ್ ಗೆ ಕರ್ಣಿಸೇನೆ ದಾಳಿ
ಮತಾಂತರದ ಆರೋಪ ಹೊರಿಸಿ ಮುಸ್ಲಿಮ್ ವ್ಯಕ್ತಿಯ ಮೇಲೆ ಬಜರಂಗದಳ ದಾಳಿ!
ಮರಣ ಪ್ರಮಾಣ ಪತ್ರಗಳಲ್ಲಿಯೂ ಮೋದಿ ಫೋಟೋ ಹಾಕಿಸಿ | ಪ್ರಧಾನಿ ಮೋದಿ ವಿರುದ್ಧ ಮಮತಾ ಆಕ್ರೋಶ