ಅನ್ ಲಾಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದಕ್ಕೆಲ್ಲ ಅವಕಾಶ ನೀಡಲಾಗಿದೆ?

rajendra kv
20/06/2021

ಮಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಂತ ಹಂತವಾಗಿ ಸಡಿಲಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಜೂನ್ 21ರಿಂದ ಬೆಳಗ್ಗೆ 7ರಿಂದ  ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.

ಜಿಲ್ಲೆಯಾದ್ಯಂತ ಅನ್ ಲಾಕ್ 1.0 ಭಾಗವಾಗಿ ಅಗತ್ಯ ವಸ್ತುಗಳ ಖರೀದಿಗೆ ಅವಧಿ ವಿಸ್ತರಿಸಲಾಗಿದೆ.  ಆಹಾರ, ದಿನಸಿ, ತರಕಾರಿ, ಮೀನು-ಮಾಂಸ, ಬೀದಿ ಬದಿ ವ್ಯಾಪಾರಕ್ಕೆ ಹಾಗೂ ಮದ್ಯ ಖರೀದಿಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು  ಮಧ್ಯಾಹ್ನ 1ರೊಳಗೆ  ಅಗತ್ಯ ವಸ್ತುಗಳನ್ನು ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ಖರೀದಿಸಬಹುದಾಗಿದೆ.

ಇನ್ನು ಜಿಲ್ಲೆಯಾದ್ಯಂತ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ವಾರಾಂತ್ಯದ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಬಸ್ ಸಂಚಾರಕ್ಕೆ ದ.ಕ.ಜಿಲ್ಲೆಯಲ್ಲಿ ಅವಕಾಶ ನೀಡಲಾಗಿಲ್ಲ. ಹೀಗಾಗಿ ಜನರು ಆಟೋ ಹಾಗೂ ಟಾಕ್ಸಿಯಲ್ಲಿ ಇಬ್ಬರು ಪ್ರಯಾಣಿಕರು ಮಾತ್ರವೇ ಪ್ರಯಾಣಿಸಬಹುದಾಗಿದೆ ಎಂದು ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

Exit mobile version