ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ವಾಹನ ಚಾಲಕ ಸಾವಿಗೆ ಶರಣು
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ತಮ್ಮ ಮನೆಯಲ್ಲೇ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಬಾಲಕೃಷ್ಣ (58) ಮೃತಪಟ್ಟವರಾಗಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿಯ ಎಂಬಲ್ಲಿ ವಾಸಿಸುತ್ತಿದ್ದ ಇವರು ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.
ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದ ಬಾಲಕೃಷ್ಣ ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಸಾವಿಗೆ ಶರಣಾಗಿರುವ ಬಗ್ಗೆ ಅವರ ಪುತ್ರ ನೀಡಿದ ದೂರಿನಂತೆ ಕಾವೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw