ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ‘ಈದ್ ಮಿಲಾದ್’ ಆಚರಣೆ
ಮಂಗಳೂರು: ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಆಚರಣೆಯು ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದಿಂದ ನಡೆಯಿತು.
ಮದ್ರಸಗಳ ಮಕ್ಕಳಿಂದ ಪ್ರವಾದಿ ಗುಣಗಾನದ ಹಾಡುಗಳು, ದಫ್ ನೊಂದಿಗೆ ಮೀಲಾದ್ ರ‍್ಯಾಲಿ ನಡೆಯಿತು. ಮಕ್ಕಳಿಗೆ ಹಾಡು, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮದ್ರಸ, ಮಸೀದಿಗಳಲ್ಲಿ ನಡೆದ ಸಭಾ ಕಾರ್ಯಕ್ರಮಗಳಿಗೆ ಪ್ರವಾದಿ ಜೀವನದ ಸಂದೇಶ ನೀಡಲಾಯಿತು. ನಗರದ ಬಂದರ್‌ನಲ್ಲಿ ಹಲವು ಮದ್ರಸಗಳ ಮಕ್ಕಳಿಂದ ಬೃಹತ್ ಮೀಲಾದ್ ರ‍್ಯಾಲಿಯು ಸಾರ್ವಜನಿಕರ ಗಮನ ಸೆಳೆಯಿತು.
ಬಂಟ್ವಾಳ, ಪುತ್ತೂರು, ಸುಳ್ಯ, ಮೂಡಬಿದ್ರೆ, ಬೆಳ್ತಂಗಡಿ, ಕಡಬ, ಉಳ್ಳಾಲ, ದೇರಳಕಟ್ಟೆ, ಕೃಷ್ಣಾಪುರ ಮತ್ತಿತರ ಕಡೆ ಮೀಲಾದ್ ರ‍್ಯಾಲಿ ನಡೆಯಿತು. ರ‍್ಯಾಲಿಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ಹಂಚಿ, ಪಾನೀಯ ನೀಡಲಾಯಿತು. ಮೀಲಾದ್ ರ‍್ಯಾಲಿಯಲ್ಲಿ ಮಕ್ಕಳಲ್ಲದೆ ಹಿರಿಯರೂ ಪಾಲ್ಗೊಂಡು ಮಿಲಾದುನ್ನಬಿಯ ಸಡಗರ, ಸಂಭ್ರಮಕ್ಕೆ ಸಾಕ್ಷಿಯಾದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka