ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಬೆದರಿಕೆ: ಹಿಂದೂ ಜಾಗರಣ ವೇದಿಕೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಂಬಂಧ ಹಿಂದೂ ಜಾಗರಣ ವೇದಿಕೆಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನವೆಂಬರ್ 21ರಂದು ಬಂಟ್ವಾಳದ ಕಾರಿಂಜದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಕಾರಂತ್, ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ, ಎಲ್ಲರೂ ಸಿದ್ಧರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಇನ್ನೂ ಜಗದೀಶ್ ಕಾರಂತ್ ಬೆದರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜಗದೀಶ್ ಕಾರಂತ್, ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ಸೂಚಿಸಿ ಅಸಭ್ಯವಾಗಿ ಮಾತನಾಡಿರುವುದಲ್ಲದೇ, ಪ್ರಚೋದನೆ ಹಾಗೂ ಅಪರಾಧಕ್ಕೆ ದುಷ್ಪ್ರೇರಣೆ ನೀಡಿದ್ದಾರೆ. ಜೊತೆಗೆ ಒಬ್ಬ ಸರ್ಕಾರಿ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ ಸರ್ಕಾರಿ ಅಧಿಕಾರಿಗೆ ಹಾನಿ, ಹಲ್ಲೆ ಮಾಡಲು ಪ್ರಚೋದಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಮುಂದಿನ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಸ್ತೆಗಳು ಕತ್ರೀನಾ ಕೈಫ್ ಳ ಕೆನ್ನೆಯಂತೆ ನುಣುಪಾಗಿರಬೇಕು ಎಂದ ಸಚಿವ!
ಪೈಪ್ ಕತ್ತರಿಸಿದಾಗ ನೀರಿನ ಬದಲು ಬಂದದ್ದು ಕಂತೆ ಕಂತೆ ಹಣ! | ಎಸಿಬಿ ಅಧಿಕಾರಿಗಳಿಗೇ ಶಾಕ್!
ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮನೆಗೆ ಎಸಿಬಿ ದಾಳಿ: ಕೋಟ್ಯಾಂತರ ಮೌಲ್ಯದ ನಗ—ನಗದು ಪತ್ತೆ
ವಿದ್ಯುತ್ ಸ್ಪರ್ಶಿಸಿ ಯುವತಿಯ ದಾರುಣ ಸಾವು
ಶಾಕ್ ನೀಡಿದ ಪಾರ್ಲೆ—ಜಿ: ಪಾರ್ಲೆ ಉತ್ಪನ್ನಗಳ ಬೆಲೆ ಏರಿಕೆ
ಆಟೋ ತಡೆದು ಸಹೋದರರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿದ ದುಷ್ಕರ್ಮಿಗಳು
ಪೊಲೀಸ್ ಠಾಣೆಯಿಂದ ಮನೆಗೆ ಬಂದ ಯುವತಿ ಆತ್ಮಹತ್ಯೆಗೆ ಶರಣು | ಪೊಲೀಸ್ ಠಾಣೆಯಲ್ಲಿ ನಡೆದದ್ದೇನು?