ಕೊವಿಡ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗೃತಾ ಕ್ರಮ
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ.
ವಿದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆಯಲ್ಲದೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸುವ ವಿದೇಶಿ ಪ್ರಯಾಣಿಕರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಈ ವೇಳೆ ಕೋವಿಡ್ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್ ಗೆ ಕಳುಹಿಸಲಾಗುತ್ತದೆ. ಕೋವಿಡ್ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ.
ಕೋವಿಡ್ ಸೋಂಕನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಆರೋಗ್ಯ ಅಣಕು ಪ್ರದರ್ಶನವು ವೆನ್ಲಾಕ್ ಸಹಿತ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka