ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ರಜೆ ಘೋಷಿಸಿದ್ದಾರೆ.
ನಿನ್ನೆ ರಾತ್ರಿ ಆರಂಭಗೊಂಡಿರುವ ಮಳೆ ಇನ್ನೂ ನಿಲ್ಲದೇ ಸುರಿಯುತ್ತಿದೆ. ಈಗಾಗಲೇ ಶಾಲೆಗೆ ವಿದ್ಯಾರ್ಥಿಗಳು ತೆರಳಿದ್ದಾರೆ. ವಿದ್ಯಾರ್ಥಿಗಳು ಶಾಲೆ ತಲುಪಿದ ಬಳಿಕ ರಜೆ ಘೋಷಿಸಲಾಗಿದ್ದು, ಇದೀಗ ವಿದ್ಯಾರ್ಥಿಗಳು ವಾಪಸ್ ಬರುವಂತಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯ ಭಾರ ಕುಸಿತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ ಜೀವನ ಅಸ್ತವ್ಯಸ್ಥವಾಗಿದೆ.
ಇನ್ನೂ ತೀವ್ರ ,ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲೆಗಳಿಗೆ ಮೇ 19ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಿವಲಿಂಗದ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಎಐಎಂಐಎಂ ನಾಯಕ ಅರೆಸ್ಟ್
ಮೊಮ್ಮಗುವನ್ನು ನೋಡಲು ಆಸ್ಪತ್ರೆಗೆ ಬಂದ ಅತ್ತೆಗೆ ಚಾಕುವಿನಿಂದ ಇರಿದ ಅಳಿಯ!
ಪೊಲೀಸರೇ ಅಪರಾಧದಲ್ಲಿ ಭಾಗಿಯಾದರೆ ಸಾರ್ವಜನಿಕರ ರಕ್ಷಣೆ ಹೇಗೆ?: ಅರಗ ಜ್ಞಾನೇಂದ್ರ ಪ್ರಶ್ನೆ
32 ವರ್ಷಗಳ ಜೈಲು ಶಿಕ್ಷೆಯ ಬಳಿಕ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ ಬಿಡುಗಡೆ