ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17 ಗ್ರಾ.ಪಂ. ಸೀಲ್ ಡೌನ್
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಪ್ರಸ್ತುತ ಕೊವಿಡ್ 19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಉಲ್ಬಣಗೊಳ್ಳುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ 50ಕ್ಕಿಂತ ಅಧಿಕ ಸಕ್ರಿಯ ಕೊವಿಡ್ ಪ್ರಕರಣಗಳಿರುವ ಗ್ರಾಮಗಳಲ್ಲಿ ಸೋಂಕು ಪ್ರಸರಣದ ಸರಪಳಿ ತುಂಡರಿಸಲು ವಿಶೇಷ ಮಾರ್ಗಸೂಚಿಯನ್ನು ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಜೂನ್ 14ರ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಈ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನೂ ಹಾಕಲಾಗಿದೆ.
ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟೆಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರ ತೆರೆಯಲು ಅವಕಾಶ ನೀಡಲಾಗಿದೆ. ಕೆಎಂಎಫ್ ಹಾಲಿನ ಬೂತ್, ರಾಜ್ಯ, ರಾಷ್ಟ್ರ ಹೆದ್ದಾರಿ ಪೆಟ್ರೋಲ್ ಬಂಕ್ ತೆರೆಯಲು ಅವಕಾಶ ಕೊಡಲಾಗಿದೆ. ವೈದ್ಯಕೀಯ, ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿಸಲಾಗಿದೆ. ಗ್ರಾಮಸ್ಥರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಗ್ರಾಮಪಡೆಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಯಾವ ತಾಲೂಕು, ಗ್ರಾ.ಪಂ.ಗಳಲ್ಲಿ ಕಟ್ಟು ನಿಟ್ಟಿನ ಕ್ರಮ?
- ಮಂಗಳೂರು: ನೀರುಮಾರ್ಗ, ಕೊಣಾಜೆ
- ಬೆಳ್ತಂಗಡಿ: ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ, ಚಾರ್ಮಾಡಿ.
- ಸುಳ್ಯ: ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು.
- ಕಡಬ: ಸುಬ್ರಹ್ಮಣ್ಯ, ಸವಣೂರು