ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಸಿದ್ದರಾಮಯ್ಯ ಖಂಡನೆ - Mahanayaka
9:50 AM Thursday 14 - November 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಸಿದ್ದರಾಮಯ್ಯ ಖಂಡನೆ

muslimarige bahiskara
23/03/2022

ಮಂಗಳೂರು: ಉಡುಪಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ಹೇರಲಾಗುತ್ತಿದೆ.

ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ನಿಷೇಧ ಎಂದು ಹಲವು ದೇವಸ್ಥಾನಗಳ ಜಾತ್ರೆಯ ಹೊರಗೆ ಗದ್ದೆಗಳಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಇದು ಮುಸ್ಲಿಂ ವ್ಯಾಪಾರಿಗಳ, ಮುಸ್ಲಿಂ ಮುಖಂಡರ, ರಾಜಕೀಯ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಉಡುಪಿ ಜಿಲ್ಲೆಯ ಕಾಪು ಮಾರಿ ಪೂಜೆಯಲ್ಲಿ ಆರಂಭವಾದ ಆರ್ಥಿಕ ಬಹಿಷ್ಕಾರ, ಇದೀಗ ದಕ್ಷಿಣ ಕನ್ನಡ ಜಿಲ್ಲೆಗೂ ಎಂಟ್ರಿ ಕೊಟ್ಟಿದೆ. ಜಿಲ್ಲೆಯ ಪ್ರಸಿದ್ಧ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 800 ವರ್ಷಗಳ ಹಿಂದೆ ಬಪ್ಪ ಬ್ಯಾರಿ ಎಂಬ ಮುಸ್ಲಿಂ ವ್ಯಾಪಾರಿ ಕಟ್ಟಿಸಿದ ಇತಿಹಾಸವಿದೆ. ಇಂದು ಈ ದೇವಾಲಯ ಸುತ್ತಮುತ್ತ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ. 80 ನೋಂದಾಯಿತ ವ್ಯಾಪಾರಿಗಳ ಪೈಕಿ 40 ವ್ಯಾಪಾರಿಗಳು ಹಿಂದಿರುಗಿದ್ದಾರೆ. ಕೆಲವರು ಮಾತ್ರ ವ್ಯಾಪಾರ ಮುಂದುವರಿಸಿದ್ದಾರೆ.

ಅಲ್ಲದೆ, ಮಂಗಳಾದೇವಿ ಹಾಗೂ ಪುತ್ತೂರು ದೇವಾಲಯದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬರಹದ ಬ್ಯಾನರ್ ದೇವಸ್ಥಾನದ ಮುಂಭಾಗ ಹಾಕಲಾಗಿದೆ.




ಶಿವಮೊಗ್ಗದಲ್ಲಿರುವ ಪ್ರಸಿದ್ಧ ಕೋಟೆ ಮಾರಿಕಾಂಬ ಜಾತ್ರೆಯಲ್ಲಿಯೂ ಮುಸ್ಲಿಂ ವ್ಯಾಪಾರಿಗಳ ಅಂಗಡಿಗೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ಬೆಂಗಳೂರು ಪಕ್ಕ ನೆಲಮಂಗಲಕ್ಕೂ ತಲುಪಿದೆ. ನೆಲಮಂಗಲದ ದೇವಸ್ಥಾನ ಜಾತ್ರೆಯಲ್ಲಿ ಮಳಿಗೆ ಹಾಕಲು ಮುಸ್ಲಿಮರಿಗೆ ಅವಕಾಶ ನಿರಾಕರಿಸಲಾಗಿದೆ.

ಖಂಡನೆ: ಹಿಂದೂ ಧಾರ್ಮಿಕ ಸಮಾರಂಭಗಳಲ್ಲಿ ಮುಸ್ಲಿಂ ವರ್ತಕರ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ನೀಡದಿರಲು ಕೆಲವು ಹಿಂದೂ ಸಂಘಟನೆಗಳು ಒತ್ತಡ ಹೇರುತ್ತಿರುವುದು ಕಳವಳಕಾರಿ ಬೆಳವಣಿಗೆ. ಇಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗಿರುವ ಜಿಲ್ಲಾಡಳಿತ ಮೌನವಾಗಿದ್ದು, ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬರೋಬ್ಬರಿ 6 ಆಟೋಗಳನ್ನು ಕಳವು ಮಾಡಿದ್ದ 16 ವರ್ಷದ ಬಾಲಕನ ಸೆರೆ

ಭಾರತದಿಂದ ಕಳ್ಳಸಾಗಣೆಯಾಗಿದ ಪುರಾತನ  ವಸ್ತುಗಳನ್ನು ಹಿಂದಿರುಗಿಸಲು ಆಸ್ಟ್ರೇಲಿಯಾ ಒಪ್ಪಿಗೆ

ಪಾವಗಡ ಅಪಘಾತ ಪ್ರಕರಣ: ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿರುವ ಸಂತ್ರಸ್ತರು!

ಕಸ ಸಾಗಾಟದ ವಾಹನ ಚಾಲಕನ ಮೇಲೆ ಗೋರಕ್ಷಕರಿಂದ ಮಾರಣಾಂತಿಕ ಹಲ್ಲೆ

ಇತ್ತೀಚಿನ ಸುದ್ದಿ