ಅನ್ಯಕೋಮಿನ ಯುವಕನ ಜೊತೆಗೆ ಯುವತಿ ಬಸ್ಸಿನಲ್ಲಿ ಪ್ರಯಾಣ: ಬಸ್ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು - Mahanayaka

ಅನ್ಯಕೋಮಿನ ಯುವಕನ ಜೊತೆಗೆ ಯುವತಿ ಬಸ್ಸಿನಲ್ಲಿ ಪ್ರಯಾಣ: ಬಸ್ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು

kalladka crime news
16/12/2022

ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ತಂಡವೊಂದು ಖಾಸಗಿ ಬಸನ್ನು ತಡೆದು ನಿಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿಯೋರ್ವಳು‌ ಪ್ರಯಾಣಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಲ್ಲಡ್ಕ ಪ್ರಖಂಡದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ದಾಸಕೋಡಿ ಎಂಬಲ್ಲಿ ಬಸ್ ತಡೆದು ನಿಲ್ಲಿಸಿದ್ದಾರೆ.

ಆ ಬಳಿಕ ಬಸ್ ನಲ್ಲಿ ಕಾರ್ಯಕರ್ತರು ಹಾಗೂ ಪ್ರಯಾಣಿಕರ ಮಧ್ಯೆ ಮಾತಿನ ಚಕಮಕಿ ನಡೆದ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ತಂಡವನ್ನು ಹಾಗೂ ಇಬ್ಬರು ಪ್ರಯಾಣಿಕರು ಠಾಣೆಗೆ ತೆರಳಿದ್ದಾರೆ. ಠಾಣೆಯಲ್ಲಿ ಮಾತುಕತೆ ಬಳಿಕ ಮನೆಯವರಿಗೆ ತಿಳಿಸಿ ಮನೆಯವರ ಜೊತೆ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ