ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕೆಂಗಣ್ಣು ರೋಗ!
ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವರ ಕಣ್ಣು ಇದ್ದಕ್ಕಿದ್ದಂತೆ ಕೆಂಪು ಕೆಂಪಾಗಿ ಕಾಣಿಸಿದ್ದು ಆತಂಕ ಮೂಡಿಸಿದೆ. ಇದು ಕೆಂಗಣ್ಣು ಎಫೆಕ್ಟ್.
ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ಯಾ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಕೆಂಗಣ್ಣು ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಕೆಲ ದಿನಗಳ ಹಿಂದೆ ಮಂಗಳೂರು ನಗರದ ಹೊರವಲಯದ
ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡೀಲ್ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದರು. ಪ್ರಸ್ತುತ ಸಮೀಪದ ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್, ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಇತರರಿಗೆ ಹರಡುವ ಸಾಧ್ಯತೆ ಇದೆ. ಕೆಂಗಣ್ಣು ಸಮಸ್ಯೆ ಬಾಧಿಸಿರುವ ಬಗ್ಗೆ ಯಾವುದೇ ಮಾಹಿತಿಗಳು ಕೆಲ ಪಂಚಾಯತ್ ಗಳಿಗೆ ಗೊತ್ತೇ ಇಲ್ಲ. ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎಂಬುದು ತಜ್ಞರ ಮಾತು.
ಏನಿದು ಕಾಯಿಲೆ..?
“ಮದ್ರಾಸ್ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್ ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ ಸೋಂಕು. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣ್ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು ರೋಗ.
ರೋಗ ಲಕ್ಷಣಗಳನ್ನು ಕಡಿಮೆ ಮಾಡಲು ಐ ಡ್ರಾಪ್ ನಂತಹ ಔಷಧಗಳನ್ನು ವೈದ್ಯರು ಸೂಚಿಸುತ್ತಾರೆ. ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವಾಗ ಕಣ್ಣುಗಳನ್ನು ಮುಟ್ಟಿ ಕೊಳ್ಳದಿರುವುದು, ಆಗಾಗ ಕೈಗಳನ್ನು ಸ್ವತ್ಛಗೊಳಿಸಿಕೊಳ್ಳುವುದು, ರೋಗಪೀಡಿತರ ಸಂಪರ್ಕದಿಂದ ದೂರ ಇರುವ ಮೂಲಕ ಕೆಂಗಣ್ಣು ಸೋಂಕು ಪ್ರಸರಣ ತಪ್ಪಿಸಬಹುದು. ಜನರು ಈ ಕಾಯಿಲೆಯಿಂದ ಮುನ್ನೆ ವಹಿಸುವುದು ಸೂಕ್ತ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka