ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಪೊಲೀಸರ ದಾಳಿ: ಹಲವು ಪಿಎಫ್ ಐ ಮುಖಂಡರು ವಶಕ್ಕೆ

ದಕ್ಷಿಣ ಕನ್ನಡ/ ಉಡುಪಿ: ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ ಐ ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.
ಜಿಲ್ಲಾ ಕಾರಾಗೃಹ, ಮಂಗಳೂರು
ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲೂ ಪಿಎಫ್ ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೂಡೆ, ಗಂಗೊಳ್ಳಿ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು ನಾಲ್ಕು ಕಡೆ ದಾಳಿ ನಡೆಸಿದ ಪೊಲೀಸರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಶಪಡಿಸಿಕೊಂಡ ಪಿಎಫ್ ಐ ಮುಖಂಡರನ್ನು ಮ್ಯಾಜಿಸ್ಟ್ರೇಟ್ ಮುಂದೆ ಪೊಲೀಸ್ರು ಹಾಜರು ಪಡಿಸಿದ್ದಾರೆ. ಇವ್ರನ್ನು ಠಾಣಾ ವ್ಯಾಪ್ತಿಯ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಲಾಗಿದೆ. ಕೋರ್ಟ್ ಗೆ ಹಾಜರುಪಡಿಸಿ ಮಂಗಳೂರಿನ ಕೊಡಿಯಾಲ್ ಬೈಲ್ ಬಳಿಯ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆತಂದಿದ್ದಾರೆ.
ಆಯಾ ಠಾಣಾ ವ್ಯಾಪ್ತಿಯ ಬಂಧಿತರನ್ನ ಪೊಲೀಸ್ರು ಕರೆ ತಂದಿದ್ದಾರೆ. ಸಿಆರ್ ಪಿಸಿ 107 ಮತ್ತು 151ರಡಿ ಪ್ರತಿಭಟನೆ ಮತ್ತು ಗಲಭೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.
ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್ ಸೇರಿ ಎಂಟು ಮಂದಿಯನ್ನು ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ ಪುತ್ತೂರು ಭಾಗದಲ್ಲಿ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka