ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕಠಿಣ ಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ
ಮಂಗಳೂರು: ಕೊರೊನಾ ಹೋಗಿದೆ, ಇನ್ನೇನು ಸಮಸ್ಯೆ ಇಲ್ಲ ಎಂದು ಜನರು ಸಾಮಾನ್ಯ ಜೀವನ ನಡೆಸಲು ಸಜ್ಜಾಗುತ್ತಿರುವಂತೆಯೇ ಮತ್ತೊಮ್ಮೆ ಕೊರೊನಾ ಹಾವಳಿಯಿಂದ ಜನ ಜೀವನ ಅಸ್ತವ್ಯಸ್ತವಾಗುತ್ತದೆಯೇ ಎನ್ನುವ ಆತಂಕ ಕೇಳಿ ಬಂದಿದ್ದು, ಈ ನಡುವೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಜೊತೆಗೆ ನಡೆಸಿದ ಸಂವಾದದಲ್ಲಿ ಜಿಲ್ಲೆಯು ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳ ಕ್ರಮವನ್ನು ಶ್ಲಾಘಿಸಿದರು. ಜೊತೆಗೆ, ನೆರೆಯ ಕೇರಳದಲ್ಲಿ ಇದೀಗ ಕೋವಿಡ್ ಸೋಂಕಿನ ಪ್ರಕರಣಗಳೂ ವ್ಯಾಪಕವಾಗಿವೆ, ಅಲ್ಲಿಂದ ಪ್ರತಿನಿತ್ಯ ಹಲವು ಕಾರ್ಯಗಳಿಗೆ ರಸ್ತೆಯ ಮೂಲಕ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚು, ಆದ ಕಾರಣ ಸೋಂಕು ನಿಯಂತ್ರಿಸಲು ಮುಂಬರುವ 15 ದಿನಗಳ ಕಾಲ ಕಠಿಣಾತಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲೆಯ ಗಡಿ ಭಾಗಗಳಲ್ಲಿ ತೆರೆಯಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು. ಅದಕ್ಕಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸುವಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೂ ನಿರ್ದೇಶನ ನೀಡಿದರು.
ಗಡಿ ದಾಟುವ ಪ್ರತಿಯೊಬ್ಬರಲ್ಲಿಯೂ ನೆಗೆಟಿವ್ ವರದಿ ಇರಬೇಕು. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದಿರಬೇಕು ಹಾಗೂ ಅವರ ಸಂಪರ್ಕವನ್ನು ಪತ್ತೆ ಹಚ್ಚಬೇಕು. ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಆಗಮಿಸುವವರಿಗೆ ಪ್ರತಿ 7 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್ ತಪಾಸಣಾ ಫಲಿತಾಂಶವನ್ನು ಪರಿಶೀಲಿಸಬೇಕು. ಪ್ರಮುಖವಾಗಿ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು. ಅಲ್ಲಿ ರ್ಯಾಟ್ ಟೆಸ್ಟ್ ಮಾಡಬೇಕು, ಹೆಚ್ಚು ಜನರು ರೈಲಿನ ಮೂಲಕ ಬರುವ ಕಾರಣ ಅಲ್ಲಿ ಕೋವಿಡ್ ಟೆಸ್ಟ್ ಮಾಡುವ ಕೌಂಟರುಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಕೋವಿಡ್ ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದದ್ರೇ ದಂಡ ವಿಧಿಸಬೇಕು, ಮಾಸ್ಕ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಗಡಿ ಭಾಗದ ತಪಾಸಣೆಗೆ ಪ್ರವಾಸ ಕೈಗೊಂಡು ಸ್ಥಿತಿ-ಗತಿಗಳನ್ನು ಅವಲೋಕಿಸುವುದಾಗಿಯೂ ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು…
ಕುರಿ, ಕೋಳಿ, ಮೀನಿನ ಬದಲು ಗೋಮಾಂಸ ಸೇವಿಸಿ ಎಂದು ಕರೆ ನೀಡಿದ ಬಿಜೆಪಿ ಸಚಿವ!
46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡ ಏರ್ ಟೆಲ್!
ವಿಚ್ಛೇದನದ ಬಳಿಕ ಜೊತೆಯಾಗಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದ ಸಹೋದರಿಯರ ಬರ್ಬರ ಹತ್ಯೆ!]
ಕಾರಾಗೃಹದ ಗೋಡೆ ಕುಸಿದು 22 ಕೈದಿಗಳಿಗೆ ಗಂಭೀರ ಗಾಯ!
ಬಿಜೆಪಿಗೆ ಬಂದ 17 ಶಾಸಕರಿಗೆ ಬಿಗ್ ಶಾಕ್ ನೀಡಿದ ಮಾಜಿ ಸಿಎಂ ಯಡಿಯೂರಪ್ಪ!
ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಸ್ ನಡಿಗೆ ಎಸೆಯಲ್ಪಟ್ಟ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು!




























