ದಕ್ಷಿಣ ಕನ್ನಡದಲ್ಲಿ ಮತ್ತೆ ಇಬ್ಬರು ಬ್ಲ್ಯಾಕ್ ಫಂಗಸ್ ಗೆ ಬಲಿ | 3 ಹೊಸ ಪ್ರಕರಣ ಪತ್ತೆ - Mahanayaka
2:59 AM Friday 20 - September 2024

ದಕ್ಷಿಣ ಕನ್ನಡದಲ್ಲಿ ಮತ್ತೆ ಇಬ್ಬರು ಬ್ಲ್ಯಾಕ್ ಫಂಗಸ್ ಗೆ ಬಲಿ | 3 ಹೊಸ ಪ್ರಕರಣ ಪತ್ತೆ

dakshina kannada black fungus cases
11/06/2021

ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 3 ಬ್ಲ್ಯಾಕ್ ಫಂಗಸ್  ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 54  ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ.

ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟವರು ಒಬ್ಬರು ಚಿಕ್ಕಮಗಳೂರಿನವರಾಗಿದ್ದು, ಮತ್ತೊಬ್ಬರು ಉತ್ತರಕನ್ನಡ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಿಲ್ಲೆಯಲ್ಲಿ ಸದ್ಯ ಕಪ್ಪು ಶಿಲೀಂಧ್ರದ 54 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 11 ದಕ್ಷಿಣ ಕನ್ನಡ ಮತ್ತು 43 ಪ್ರಕರಣಗಳು ಹೊರಜಿಲ್ಲೆಗೆ ಸಂಬಂಧಿಸಿದ್ದಾಗಿದ್ದು, ರೋಗಿಗಳು ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Provided by

ಹೊರ ಜಿಲ್ಲೆಯ ನಾಲ್ಕು ಮಂದಿ ಕಪ್ಪು ಶಿಲೀಂಧ್ರ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿನ ಲಕ್ಷಣ ಹೊಂದಿದ್ದ ದಕ್ಷಿಣ ಕನ್ನಡದ ಇಬ್ಬರು ಮತ್ತು ಹೊರ ಜಿಲ್ಲೆಯ 10 ಮಂದಿಯ ಸೇರಿದಂತೆ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ