ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಸಡಿಲ: ಸಾರ್ವಜನಿಕರಿಗೆ, ಮದ್ಯ ಪ್ರಿಯರಿಗೆ ಸಿಹಿ ಸುದ್ದಿ - Mahanayaka
6:27 PM Thursday 6 - February 2025

ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಸಡಿಲ: ಸಾರ್ವಜನಿಕರಿಗೆ, ಮದ್ಯ ಪ್ರಿಯರಿಗೆ ಸಿಹಿ ಸುದ್ದಿ

mangalore
04/08/2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ರಾತ್ರಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು ನಾಳೆಯಿಂದ ರಾತ್ರಿ 9 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ನಾಳೆಯಿಂದ ಅಂದ್ರೆ ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ  ರಾಜೇಂದ್ರ ಕೆ.ವಿ. ಆದೇಶಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಅಂಗಡಿ ಮುಂಗಟ್ಟುಗಳು ಮುಚ್ಚಲಿವೆ.

ಆಗಸ್ಟ್ 5ರಿಂದ ಮದ್ಯದಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಸೆಕ್ಷನ್ 144  ಈ ಹಿಂದಿನಂತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ