ಭಾರೀ ಮಳೆ ಹಿನ್ನೆಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ - Mahanayaka
5:27 PM Wednesday 5 - February 2025

ಭಾರೀ ಮಳೆ ಹಿನ್ನೆಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

dakshina kannada
30/06/2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 1(ನಾಳೆ)ರಂದು ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬೆಳಗ್ಗೆ 8:30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಿದೆ. ಇದರ ನಡುವೆ ನಾಳೆಯೂ ಧಾರಾಕಾರ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರಜೆ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸುರಿದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ವಿದ್ಯಾರ್ಥಿಗಳು, ಪೋಷಕರು, ಶಾಲಾ ವಾಹನ ಚಾಲಕರು ಮಳೆಯಿಂದಾಗಿ ಪರದಾಡುವಂತಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ರಸ್ತೆಗಳಲ್ಲಿಯೇ ನೀರು ಹರಿದ ಪರಿಣಾಮ ಸಾರ್ವಜನಿಕರು ಸಾಕಷ್ಟು ತೊಂದರೆಗೀಡಾಗಿದ್ದರು. ವಿವಿಧೆಡೆ ಕೃತಕ ನೆರೆ ಸೃಷ್ಟಿಯಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ: ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿ!

ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ!

ರೋಡು ತೋಡಾಯಿತು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ವಿದ್ಯಾರ್ಥಿಗಳು ರಸ್ತೆ ದಾಟಿದ್ದು ಹೀಗೆ

ಮಂಗಳೂರಿನಲ್ಲಿ ಕೃತಕ ನೆರೆ: ಶಾಲಾ ವಾಹನ ಚಾಲಕರ ಪಾಡು ಹೇಳತೀರದು!

ಇತ್ತೀಚಿನ ಸುದ್ದಿ