ವಿದ್ಯಾರ್ಥಿನಿ ಜೊತೆಗೆ ಜ್ಯೂಸ್ ಕುಡಿಯುತ್ತಿದ್ದ ಸಹಪಾಠಿ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ
ಸಹಪಾಠಿ ವಿದ್ಯಾರ್ಥಿನಿ ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ಸಹಪಾಠಿ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮಹಮ್ಮದ್ ಫಾರಿಸ್ (18) ಹಲ್ಲೆಗೊಳಗಾದ ವಿದ್ಯಾರ್ಥಿ. ಈತ ತನ್ನ ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ ಬಸ್ ನಿಲ್ದಾಣದ ಬಳಿಯಲ್ಲಿ ಜ್ಯೂಸ್ ಕುಡಿಯತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಸುಮಾರು 15 ಮಂದಿಯ ತಂಡ ಅಲ್ಲಿಗೆ ಆಗಮಿಸಿ ಆತನ ಹೆಸರು ಕೇಳಿ ಬಳಿಕ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.
ಹಲ್ಲೆಗೊಳಗಾಗಿರುವ ಮಹಮ್ಮದ್ ಫಾರಿಸ್ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಮತ್ತು ನನ್ನ ತರಗತಿಯ ವಿದ್ಯಾರ್ಥಿನಿ ಜ್ಯೂಸ್ ಕುಡಿಯುತ್ತಿದ್ದ ವೇಳೆ ಅಲ್ಲಿಗೆ ಬಂದ ಸುಮಾರು 15 ಮಂದಿ ಪುತ್ತೂರಿನ ಐಟಿಐ ಕಾಲೇಜ್ ವಿದ್ಯಾರ್ಥಿಗಳು ನನ್ನ ಹೆಸರು ಕೇಳಿದರು.
ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದ್ರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw