ಕುಡಿಯುವ ನೀರು ಮುಟ್ಟಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಹತ್ಯೆ ಮಾಡಿದ ಶಿಕ್ಷಕ!

ಜಾಲೋರ್: ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿಯೇ ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಯೊಬ್ಬನನ್ನು ಜಾತಿಯ ಕಾರಣಕ್ಕಾಗಿ ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
9 ವರ್ಷ ವಯಸ್ಸಿನ ದಲಿತ ಬಾಲಕ ಇಂದ್ರ ಮೇಘವಾಲ್ ಹತ್ಯೆಗೀಡಾದವನಾಗಿದ್ದಾನೆ. ಶಾಲೆಯಲ್ಲಿ ಕುಡಿಯುವ ನೀರನ್ನು ಮುಟ್ಟಿದ ಎಂಬ ಕಾರಣಕ್ಕಾಗಿ ಶಿಕ್ಷಕ ಚೈಲ್ ಸಿಂಗ್(45) ಎಂಬಾತ ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ್ದ. ಶಿಕ್ಷಕನ ಹಲ್ಲೆಯಿಂದ ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿಯನ್ನು ಅಹ್ಮದಾಬಾದ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ರಾಜಸ್ಥಾನದ ಎಸ್ ಸಿ ಆಯೋಗದ ಅಧ್ಯಕ್ಷ ಖಿಲಾಡಿ ಲಾಲ್ ಬೈರ್ವಾ ಅವರು ತ್ವರಿತ ತನಿಖೆಗೆ ಆದೇಶಿಸಿದ್ದಾರೆ. ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 302 ಮತ್ತು ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka