ದಲಿತ ಮಹಿಳೆಯ ಕಪಾಳಕ್ಕೆ ಬಾರಿಸಿದ ಸಚಿವ ವಿ.ಸೋಮಣ್ಣ: ಇದೇನಾ ಜನ ಸಂಕಲ್ಪ?
ಚಾಮರಾಜನಗರ: ಒಂದೆಡೆ ರಾಜ್ಯ ಬಿಜೆಪಿ ಜನ ಸಂಕಲ್ಪ ಯಾತ್ರೆ ಮಾಡ್ತಿದೆ. ಆದರೆ ಇತ್ತ ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ದಲಿತ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಅವರು ಕಪಾಳಕ್ಕೆ ಬಾರಿಸಿ ದೌರ್ಜನ್ಯ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.
ಒಬ್ಬ ಸಚಿವರಾಗಿದ್ದುಕೊಂಡು ಮಹಿಳೆಯರ ಮೇಲೆ ಕೈ ಮಾಡುವುದೇ? ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳುವುದೂ ಈ ರಾಜ್ಯದಲ್ಲಿ ತಪ್ಪಾಗಿ ಹೋಯಿತೇ? ಎನ್ನುವ ಆಕ್ರೋಶದ ಮಾತುಗಳು ಇದೀಗ ಕೇಳಿ ಬಂದಿದೆ. ಸಚಿವರ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಪೊಲೀಸರ ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಳ್ಳಬೇಕು. ನೊಂದ ಮಹಿಳೆ ಹಾಗೂ ಕುಟುಂಬಕ್ಕೆ ರಕ್ಷಣೆ ನೀಡಬೇಕು ಅನ್ನೋ ಒತ್ತಾಯ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka