ದಲಿತ ಮುಖಂಡ ಸುಂದರ್ ಕಪ್ಪೆಟ್ಟು ಕೊವಿಡ್ ಗೆ ಬಲಿ - Mahanayaka
6:08 PM Thursday 12 - December 2024

ದಲಿತ ಮುಖಂಡ ಸುಂದರ್ ಕಪ್ಪೆಟ್ಟು ಕೊವಿಡ್ ಗೆ ಬಲಿ

sundar kappetu
30/05/2021

ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ಸುಂದರ್ ಕಪ್ಪೆಟ್ಟು ಅವರು ಕೊವಿಡ್ ಸೋಂಕಿನಿಂದ ಇಂದು ನಿಧನರಾಗಿದ್ದಾರೆ.

52 ವರ್ಷದ ಸುಂದರ್ ಅವರಿಗೆ ಕೆಲವು ದಿನಗಳ ಹಿಂದೆ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯ ಜೀವವಿಮಾ ನಿಗಮದ ಕುಂದಾಪುರ ಶಾಖೆಯ ಉದ್ಯೋಗಿಯಾಗಿದ್ದ ಸುಂದರ್ ಕಪ್ಪೆಟ್ಟು, ದಲಿತ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಹಲವಾರು ಹೋರಾಟ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದರು. ಸುಂದರ್ ಅವರು,  ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

ಇತ್ತೀಚಿನ ಸುದ್ದಿ