ದಲಿತ್ ಸೇವಾ ಸಮಿತಿಯ ಮಾಸಿಕ ಸಭೆ: ಪಿ.ಡೀಕಯ್ಯರಿಗೆ ಶ್ರದ್ಧಾಂಜಲಿ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ಇತ್ತೀಚೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಯು.ವಿಟ್ಲ ಇವರ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಅಗಲಿದ ದಲಿತ ಚಳುವಳಿಯ ನೇತಾರ ಪಿ.ಡೀಕಯ್ಯರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಮಾಸಿಕ ಸಭೆಯ ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸಾದ್ ಬೊಳ್ಮಾರ್, ಜಿಲ್ಲಾ ಸಂಚಾಲಕರಾದ ಗೋಪಾಲ ನೇರಳಕಟ್ಟೆ, ಬಂಟ್ವಾಳ ತಾಲೂಕು ಶಾಖೆಯ ಅಧ್ಯಕ್ಷರಾದ ವಸಂತ ಕುಕ್ಕೆಬೆಟ್ಟು, ಪ್ರಧಾನ ಕಾರ್ಯದರ್ಶಿಯಾದ ಪ್ರಸಾದ್ ಅನಂತಾಡಿ, ಮಹಿಳಾ ಘಟಕದ ಉಪಾಧ್ಯಕ್ಷೆಯಾದ ವಿಮಲ ಮುಳಿಯ ಉಪಸ್ಥಿತರಿದ್ದರು.
ಪ್ರಸಾದ್ ಅನಂತಾಡಿಯವರು ಸರ್ಕಾರದ ಸೌಲಭ್ಯಗಳ ಬಗ್ಗೆ ಅನೇಕ ಮಾಹಿತಿಗಳನ್ನು ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಂದ್ರಶೇಖರ್. ಯು.ವಿಟ್ಲರವರು ಪ್ರಸ್ತುತ ಸಂಘಟನೆಯ ಅಗತ್ಯತೆಯ ಬಗ್ಗೆ ಸಭೆಗೆ ತಿಳಿಸಿದರು. ಅಂತಿಮವಾಗಿ ರಾಷ್ಟ್ರಗೀತೆಯೊಂದಿಗೆ ಸಭೆಯು ಮುಕ್ತಾಯಗೊಂಡಿತು.
ಈ ಇದೇ ದಿನ(ಜುಲೈ 17) ದಿನ ದಲಿತ್ ಸೇವಾ ಸಮಿತಿಯ ಸ್ಥಾಪಕಧ್ಯಕ್ಷರಾದ ಬಿ.ಕೆ.ಸೇಸಪ್ಪ ಬೆದ್ರಕಾಡುರವರು ಬೆಳ್ತಂಗಡಿಯ ಶ್ರೀನಾರಾಯಣ ಗುರು ಸಭಾ ಭವನದಲ್ಲಿ ನಡೆದ ಪಿ.ಡೀಕಯ್ಯನವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka