ಶಾಶ್ವತ ಸೂರಿಗಾಗಿ ರಸ್ತೆಯಲ್ಲಿ 6 ಕಿ.ಮೀ. ಉದ್ದಂಡ ನಮಸ್ಕಾರ ಹಾಕಿ ದಲಿತ ಮಹಿಳೆಯರು! - Mahanayaka

ಶಾಶ್ವತ ಸೂರಿಗಾಗಿ ರಸ್ತೆಯಲ್ಲಿ 6 ಕಿ.ಮೀ. ಉದ್ದಂಡ ನಮಸ್ಕಾರ ಹಾಕಿ ದಲಿತ ಮಹಿಳೆಯರು!

dalith womens protest
01/09/2021


Provided by

ವಿಜಯಪುರ: ದಲಿತರಿಗೆ ಮೀಸಲಾತಿ ಕೊಡ್ತಾರೆ, ಮನೆ ಕೊಡ್ತಾರೆ ಎಂದೆಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಚುಚ್ಚುವವರಿಗೆ, ಹಂಗಿಸುವವರಿಗೇನೂ ಕಡಿಮೆ ಇಲ್ಲ. ಆದರೆ, ಎಷ್ಟು ದಲಿತರ ಪರಿಸ್ಥಿತಿ ಇಂದಿಗೂ ಶೋಚನೀಯವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

ಹೌದು…! 30 ವರ್ಷಗಳಿಂದ ಬೇರೆಯವರ ಜಾಗದಲ್ಲಿ ಜೋಪಡಿಯಲ್ಲಿ ವಾಸಮಾಡುತ್ತಿರುವ ದಲಿತ ಕುಟುಂಬದ ಮಹಿಳೆಯರು, ನಮಗೆ ಶಾಶ್ವತ ಸೂರು ಕಲ್ಪಿಸಿ ಎಂದು ಧರಣಿ ನಡೆಸುತ್ತಿದ್ದು, ಇದರ ಭಾಗವಾಗಿ ಗ್ರಾಮದ ಮಹಿಳೆಯರು ಸುಮಾರು 6 ಕಿ.ಮೀ.ವರೆಗೆ ದೀರ್ಘದಂಡ ನಮಸ್ಕಾರ ಹಾಕುತ್ತಾ, ಸರ್ಕಾರದ ಕಣ್ತೆರೆಸಲು ಪ್ರಯತ್ನಿಸಿದ್ದಾರೆ.

ವಿಜಯಪುರದ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ದಲಿತ ಕುಟುಂಬದ ಮಹಿಳೆಯರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಪ್ರತಿಭಟನೆ ನಡೆದಿದ್ದಾರೆ.  ಇಲ್ಲಿ ಸುಮಾರು 15ಕ್ಕೂ ಅಧಿಕ ಕುಟುಂಬಗಳು ನಿರಾಶ್ರಿತರಾಗಿದ್ದು, ಸರ್ಕಾರ ಕನಿಷ್ಠ ಮೂಲಭೂತ ಸೌಕರ್ಯಗಳನ್ನೂ ಒದಗಿಸಿಲ್ಲ.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಆ ಮನವಿ ಪತ್ರ ಕಸದ ಬುಟ್ಟಿಗೆ ಸೇರಿದೆಯೇ ತಿಳಿದಿಲ್ಲ. ಈವರೆಗೆ ಯಾವೊಬ್ಬ ಅಧಿಕಾರಿಯೂ ಈ ಬಗ್ಗೆ ಗಮನ ಹರಿಸಿಲ್ಲ.  ವಾರಗಳಿಂದ ದಲಿತರು ಧರಣಿ ನಡೆಸುತ್ತಿದ್ದಾರೆಯಾದರೂ ಯಾವೊಬ್ಬ ಅಧಿಕಾರಿಯೂ ಕ್ಯಾರೇ ಅನ್ನುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಹೇಳಿದ್ದಾರೆ. ಈ ಬಗ್ಗೆ ದಲಿತ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

 

ಗಾಯದ ಮೇಲೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ

ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ\

ಅಫ್ಘಾನಿಸ್ತಾನ ತೊರೆದ ಅಮೆರಿಕ ಸೇನೆ: ಆಗಸಕ್ಕೆ ಗುಂಡು ಹಾರಿಸಿ ಸಂಭ್ರಮಿಸಿದ ತಾಲಿಬಾನಿಗರು

ಮಗುವಿಗೆ ಚಪ್ಪಲಿಯಲ್ಲಿ ಹೊಡೆದು ಚಿತ್ರ ಹಿಂಸೆ ನೀಡಿದ್ದ ತಾಯಿ ಅರೆಸ್ಟ್!

ಏಳೆಂಟು ವರ್ಷದ ಪ್ರೀತಿ ನಡು ರಸ್ತೆಯಲ್ಲಿ ದುರಂತ ಅಂತ್ಯ! | ಪ್ರಿಯತಮೆಯ ಕತ್ತು ಸೀಳಿ, ತನ್ನ ಕತ್ತನ್ನೂ ಸೀಳಿಕೊಂಡ!

ವಿಪರೀತ ವೇಗದಿಂದ ಬಂದು ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಕಾರು: 7 ಮಂದಿ ಬಲಿ

ಇತ್ತೀಚಿನ ಸುದ್ದಿ