ಬೆಳ್ತಂಗಡಿ: ದಲಿತ ಯುವಕನ ಅಸಹಜ ಸಾವು ಪ್ರಕರಣ—ನಾಲ್ವರು ಆರೋಪಿಗಳು ಅರೆಸ್ಟ್

ಬೆಳ್ತಂಗಡಿ: ತಾಲೂಕಿನ ಶಿಬಾಜೆಯಲ್ಲಿ ದಲಿತ ಯುವಕನ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಎಂಬವರಾಗಿದ್ದಾರೆ.
ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆ ಮೂಲದ ದಲಿತ ಯುವ ಶ್ರೀಧರ (30)ಎಂಬವರ ಮೃತದೇಹ ಕಳೆದ ಡಿ.18ರಂದು ಬೆಳಗ್ಗೆ ಇವರು ಕೆಲಸ ಮಾಡುವ ತೋಟದ ಮೂಲೆಯಲ್ಲಿ ಕಂಡು ಬಂದಿತ್ತು.
ಡಿ 17ರಂದು ನಾಲ್ವರು ಆರೋಪಿಗಳು ಸೇರಿ ಶ್ರೀಧರನ ಮೇಲೆ ಹಲ್ಲೆ ನಡೆಸಿದ್ದು ಸ್ಥಳೀಯರು ಶ್ರೀಧರನನ್ನು ರಕ್ಷಿಸಿದ್ದರು. ಇದೊಂದು ವ್ಯವಸ್ಥಿತ ಕೊಲೆ ಎಂಬ ಅನುಮಾನ ವ್ಯಕ್ತವಾಗಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ದ ಕೊಲೆ ಹಾಗೂ ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿತ್ತು.
ಘಟನೆಯ ಬಳಿಕ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳು ಪ್ರತಿಭಟನೆಗೂ ಮುಂದಾಗಿದ್ದರು. ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw