ದಲಿತ ಯುವಕನ ಕೊಲೆ ಆರೋಪಿಗಳನ್ನು ಬಂಧಿಸಲು ಮೊಗೇರ ಸಂಘ ಒತ್ತಾಯ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯ ಕುರುಂಜ ಗ್ರಾಮದ ದಲಿತ ಯುವಕನ ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ತನಿಖಾಧಿಕಾರಿಗಳನ್ನು ಬದಲಾಯಿಸಬೇಕು. ಪ್ರಕರಣದ ಬಗ್ಗೆ ಸಿಒಡಿ ತನಿಖೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮೊಗೇರ ಸಂಘ ಮತ್ತು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಹತ್ಯೆ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ ಮತ್ತು ದಲಿತ ದೌರ್ಜನ್ಯದಂತಹ ಗಂಭೀರ ಪ್ರಕರಣಗಳು ದಾಖಲಾಗಿದ್ದರೂ ಕೂಡ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸರು ಆರೋಪಿಗಳನ್ನು ಬಂಧಿಸದೆ ಅವರಿಗೆ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಆರೋಪಿಸಿದರು.
ಆರೋಪಿಗಳಿಗೆ ಆಡಳಿತ ಪಕ್ಷದ ಮುಖಂಡರ ಬೆಂಬಲವಿದೆ. ಪಕ್ಷದ ಮುಖಂಡರೋರ್ವರು ಆರೋಪಿಗಳನ್ನು ಡಿವೈಎಸ್ಪಿ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ರಾಜಕೀಯ ಮುಖಂಡ ಹಾಗೂ ಎಲ್ಲಾ ಆರೋಪಿಗಳು ಜೊತೆಯಾಗಿ ತೆಗೆದುಕೊಂಡಿರುವ ಸೆಲ್ಫಿ ಚಿತ್ರವನ್ನು ಆರೋಪಿಯೋರ್ವ ಸ್ಟೇಟಸ್ ಹಾಕಿಕೊಂಡಿದ್ದನು. ಈ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಆರೋಪಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka