ದಲಿತ ಯುವತಿ ಮಾನಭಂಗಕ್ಕೆ ಯತ್ನ: ಪಂಚಾಯತ್ ನೌಕರರನನ್ನು ವಜಾಗೊಳಿಸಲು ಒತ್ತಾಯ
ವಿಟ್ಲ: ವಿಟ್ಲ ಪಂಚಾಯತ್ ಗೆ ಬಂದಿದ್ದ ದಲಿತ ಯುವತಿ ಮಾನಭಂಗಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿರುವ ಆರೋಪಿ ಉಸ್ಮಾನ್ (57)ನನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸ್ಥಾಪಕಧ್ಯಕ್ಷರಾದ ಸೇಸಪ್ಪ ಬೆದ್ರಕಾಡು ನೇತೃತ್ವದಲ್ಲಿ ಪುಣಚ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಲಾಯಿತು.
ಈ ವೇಳೆ ಸಮಿತಿಯ ಸ್ಥಾಪಕಧ್ಯಕ್ಷರಾದ ಸೇಸಪ್ಪ ಬೆದ್ರಕಾಡು ಮಾತನಾಡಿ, ದಲಿತ ಯುವತಿಯ ಮಾನಭಂಗಕ್ಕೆ ಯತ್ನಿಸಿರುವ ಪಂಚಾಯತ್ ನೌಕರನನ್ನು ಕೂಡಲೇ ಕರ್ತವ್ಯದಿಂದ ವಜಾಗೊಳಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಇಲ್ಲವಾದಲ್ಲಿ ದಲಿತ್ ಸೇವಾ ಸಮಿತಿ ವತಿಯಿಂದ ಪಂಚಾಯತ್ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಯು. ವಿಟ್ಲ, ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ಸಮಿತಿಯ ಬಂಟ್ವಾಳ ತಾಲೂಕಿನ ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka