ದಲಿತರ ಮೇಲೆ ದೌರ್ಜನ್ಯಗಳಾದಾಗ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ | ದಲಿತ ಸಂಘರ್ಷ ಸಮಿತಿ ಹೇಳಿಕೆ - Mahanayaka

ದಲಿತರ ಮೇಲೆ ದೌರ್ಜನ್ಯಗಳಾದಾಗ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ | ದಲಿತ ಸಂಘರ್ಷ ಸಮಿತಿ ಹೇಳಿಕೆ

20/02/2021

ಬೀದರ್:  ಉತ್ತರಪ್ರದೇಶದಲ್ಲಿ ನಡೆದ ದಲಿತ ಬಾಲಕಿಯರ ಹತ್ಯೆ ಹಾಗೂ  ಬಾಗಲಕೋಟ್ ಜಿಲ್ಲೆಯ ಮುಧೋಳ ತಾಲೂಕಿನ ವಜ್ರಾಮಟ್ಟಿ ಗ್ರಾಮದ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳಿಗೆ  ಗಲ್ಲು ಶಿಕ್ಷೆ ನೀಡಬೇಕು ಎಂದು  ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೀದರ್ ಜಿಲ್ಲಾ ಸಮಿತಿ ಒತ್ತಾಯಿಸಿದೆ.


Provided by

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಳ ಸಮುದಾಯದ ಕುಟುಂಬಗಳ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಅನ್ಯಾಯ ನಡೆಯುತ್ತಲೇ ಇದೆ. ಘಟನೆ ನಡೆದಾಗ ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡದೇ ಇರುವುದರಿಂದ ಇಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ ಎಂದು ಸಂಘಟನೆ ರಾಜ್ಯ ಗೃಹ ಸಚಿವರಿಗೆ ನೀಡಿದ ಮನವಿಯಲ್ಲಿ ಹೇಳಿದೆ.

ದಲಿತರ ಮೇಲೆ ಅನ್ಯಾಯ, ಅತ್ಯಾಚಾರಗಳು ನಡೆಯುವಂತಹ ಘಟನೆಗಳನ್ನು ತಡೆಯಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸಾಧ್ಯ ಇದೆ ಆದರೆ, ಆರೋಪಿಗಳ ಪರ ನಿಂತಂತೆ ಸರ್ಕಾರಗಳು  ಆರೋಪಿಗಳ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಸರ್ಕಾರದ ಇಂತಹ ನಡೆಗಳನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಬೀದರ್ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.


Provided by

ಇತ್ತೀಚಿನ ಸುದ್ದಿ