ದಲಿತ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆ್ಯಸಿಡ್ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ
ಲಕ್ನೋ: ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲವು ದುಷ್ಕರ್ಮಿಗಳು ಆತನ ಹಣೆ ಮೇಲೆ ಆ್ಯಸಿಡ್ನಿಂದ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ.
ಸಹರಾನ್ಪುರ್ ಜಿಲ್ಲೆಯ ಆದೇಶ್ ಹಲ್ಲೆಗೊಳಗದ ದಲಿತ ಯುವಕ. ಈ ಘಟನೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.
ಮಾಹಿತಿ ಪ್ರಕಾರ, ಸಹರಾನ್ಪುರ್ ಜಿಲ್ಲೆಯ ಆದೇಶ್ ಎಂಬ ದಲಿತ ಯುವಕನಿಗೆ ಹೋಳಿ ಹಬ್ಬದ ದಿನ ವಿಶಾಲ್ ರಾಣಾ ಎಂಬ ಮೇಲ್ಜಾತಿ ವ್ಯಕ್ತಿಯೊಬ್ಬ ಫೋನ್ ಮಾಡಿ ಕರೆಯಿಸಿಕೊಂಡಿದ್ದು, ತಾನು ಮದ್ಯಪಾನ ಮಾಡುತ್ತಿದ್ದ ಗ್ಲಾಸ್ ಕ್ಲೀನ್ ಮಾಡುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಗ್ಲಾಸ್ ಆದೇಶ್ ಕಾಲಿನ ಮೇಲೆ ಬಿದ್ದಿದೆ. ಇದರಿಂದ ಆಕ್ರೋಶಗೊಂಡಿರುವ ಆತ ತನ್ನ ಸಹಚರರೊಂದಿಗೆ ಸೇರಿಕೊಂಡು ಥಳಿಸಿದ್ದಾನೆ.
ಇದರ ಬೆನ್ನಲ್ಲೇ ಆತನ ಕೈ-ಕಾಲು ಹಿಡಿದುಕೊಂಡು ಹಣೆಯ ಮೇಲೆ ಆ್ಯಸಿಡ್ ಎರಚಿದ್ದು, ತದನಂತರ ತ್ರಿಶೂಲ ಬಿಡಿಸಿದ್ದಾರೆ. ಈ ವೇಳೆ ಹಲ್ಲೆ ಮಾಡದಂತೆ ಮನವಿ ಮಾಡಿದರೂ, ಆತನ ಮಾತು ಯಾರೂ ಕೇಳಿಲ್ಲ. ಅವರ ಕೈಯಿಂದ ತಪ್ಪಿಸಿಕೊಂಡು ಬಂದಿರುವ ವ್ಯಕ್ತಿ ಮನೆಯಲ್ಲಿ ಮಾಹಿತಿ ನೀಡಿದ್ದಾನೆ. ಇದರ ಬೆನ್ನಲ್ಲೇ ಪೊಲೀಸ್ ಠಾಣೆಗೆ ತೆರಳಿರುವ ಕುಟುಂಬಸ್ಥರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಬೆನ್ನಲ್ಲೇ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಲಾಗಿದ್ದು, ದೂರು ವಾಪಸ್ ಹಿಂಪಡೆಯದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಸಂತ್ರಸ್ತ ಯುವಕ ಹೇಳಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಉ.ಪ್ರ. ನಿಯೋಜಿತ ಸಿಎಂ ಯೋಗಿ ಆದಿತ್ಯನಾಥ್ಗೆ ನೋಟಿಸ್ ಜಾರಿ
ಟಿಂಬರ್ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ: 11 ಮಂದಿ ಸಜೀವ ದಹನ
ಉತ್ತರ ಪ್ರದೇಶ: ಗುಂಡಿಟ್ಟು ಬಿಜೆಪಿ ನಾಯಕನ ಹತ್ಯೆ
ವಿಶ್ವದ ನಂಬರ್ 1 ಟೆನಿಸ್ ಆಟಗಾರ್ತಿ ಆಶ್ಲೆ ಬಾರ್ಟಿ ನಿವೃತ್ತಿ