ದಲಿತ ಯುವಕನ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಮುದಾಯದ ವ್ಯಕ್ತಿಯನ್ನು ಬೆಳ್ತಂಗಡಿಯಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಜೆಪಿ ಮುಖಂಡ ಧರ್ಮಸ್ಥಳ ನಿವಾಸಿ ಕಿಟ್ಟ ಯಾನೆ ಕೃಷ್ಣ ಪೊಲೀಸ್ ವಶದಲ್ಲಿರುವ ಆರೋಪಿ. ಕನ್ಯಾಡಿ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನ ವಶಕ್ಕೆ ಪಡೆದಿರುವ ಪೊಲೀಸರು, ಹೆಚ್ಚಿನ ವಿಚಾರಣೆ ಮುಂದುವರಿಸಿದ್ದಾರೆ.
ಕೊಲೆ ಪ್ರಕರಣವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದು, ಆರೋಪಿಯನ್ನ ತಕ್ಷಣ ಬಂಧಿಸವಂತೆ ಒತ್ತಾಯಿಸಿದ್ದರು. ಅಲ್ಲದೆ, ಆರೋಪಿ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಮುಂದಿನ 24 ಗಂಟೆಯೊಳಗೆ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಷ್ಯಾದ ಸಾರಿಗೆ ವಿಮಾನ ಹೊಡೆದುರುಳಿಸಿದ ಉಕ್ರೇನ್ : ಅಧಿಕಾರಿಗಳ ಮಾಹಿತಿ
ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ
10ನೇ ಮಹಡಿಯ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಬಿಜೆಪಿ ಜತೆ ಮೈತ್ರಿ ಇಲ್ಲ: ಬಿಎಸ್ ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ