ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ದಲಿತ, ಮುಸ್ಲಿಮರ ಕಡೆಗಣನೆ: ಹೆಚ್.ವಿಶ್ವನಾಥ್ ಆರೋಪ

ಮಡಿಕೇರಿ: ಹಾವೇರಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಲಿತ ಹಾಗೂ ಮುಸ್ಲಿಮರನ್ನು ಕಡೆಗಣಿಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ಎಂಲ್ ಸಿ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಸಮ್ಮೇಳನದಲ್ಲಿ 85 ಸಾಧಕರಿಗೆ ಸನ್ಮಾನ ಮಾಡಲಾಗುತ್ತಿದ್ದು, ಇರದಲ್ಲಿ ಮುಸ್ಲಿಂ ಮತ್ತು ದಲಿತರನ್ನು ಕಡೆಗಣಿಸಲಾಗಿದೆ. ಇದರಲ್ಲೂ ರಾಜಕೀಯ ಮಾಡಲಾಗಿದೆ ಎಂದು ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ.
ದಿಕ್ಕುದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನ ಧಿಕ್ಕರಿಸುತ್ತೇನೆ. ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ. ಬಿಡುಗಡೆ ಮಾಡಿದೆ. ಹಣ ಕೊಟ್ಟು ಸಭೆ ಮಾಡದೆ ಮೌನವಾಗಿರುವುದು ಸರಿಯಲ್ಲ. ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ಕಾರ್ಯಕ್ರಮ ಆಗಬಾರದು. ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲಾ ಕನ್ನಡಿಗರ ಸಮ್ಮೇಳನವಾಗಬೇಕು ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಜನವರಿ 6, 7, 8ರಂದು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆಗಳನ್ನು ಸಹ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಈ ಗಂಭೀರ ಆರೋಪ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw