ದಲಿತ ಕುಟುಂಬಕ್ಕೆ, ನ್ಯಾಯಾಲಯಕ್ಕೆ ವಂಚನೆ: ವಕೀಲನಿಗೆ ಜೀವಾವಧಿ ಶಿಕ್ಷೆ
ಉಡುಪಿ: ಅಪಘಾತ ವಿಮೆ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಪ.ಜಾತಿಯವರಿಗೆ ಸಿಗಬೇಕಾದ ಅಪಘಾತ ಪರಿಹಾರವನ್ನು ಲಪಟಾಯಿಸಿ ಸಂತ್ರಸ್ತರಿಗೆ 2.5 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ವಕೀಲ ಅಲೆವೂರು ಪ್ರೇಮರಾಜ ಕಿಣಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಪ್ರಕರಣದ ಎರಡನೇ ಆರೋಪಿ ವಿನಯ ಕುಮಾರ್, ಮೃತಪಟ್ಟಿರುವ ಮೂರನೇ ಆರೋಪಿ ಹರಿಶ್ಚಂದ್ರ ಆಚಾರ್ಯ ಅವರೊಂದಿಗೆ ಸೇರಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಬಡ ದಲಿತ ಕೂಲಿ ಕಾರ್ಮಿಕ ಸಾಧು ಮತ್ತು ಕುಟುಂಬಕ್ಕೆ ವಂಚಿಸಿ ಸುಮಾರು 2.5 ಲಕ್ಷ ರೂ.ಗಳಿಗೂ ಹೆಚ್ಚು ಮೊತ್ತದ ಅಪಘಾತ ವಿಮಾ ಪರಿಹಾರವನ್ನು ಕಬಳಿಸಿರುವ ಬಗ್ಗೆ ಉಡುಪಿ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು.
ದಲಿತ ಕುಟುಂಬದ ಪರವಾಗಿ ಉಡುಪಿಯ ದಲಿತ ಮುಖಂಡ ಜಯನ್ ಮಲ್ಪೆ ನೇತೃತ್ವದಲ್ಲಿ ದಸಂಸ ಹೋರಾಟ ನಡೆಸಿತ್ತು. ಪ್ರಕರಣದ 3ನೇ ಆರೋಪಿ ಮೃತಪಟ್ಟಿದ್ದು, ಪ್ರಕರಣದ ವಿಚಾರಣೆ ವೇಳೆ ಪ್ರೇಮರಾಜ ಕಿಣಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಾರತೀಯ ವಧುವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಿಟನ್ ಅಧಿಕಾರಿ
ಫ್ಲ್ಯಾಟ್ ನೊಳಗೆ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ದೂರು ದಾಖಲು
ದೇವಸ್ಥಾನದಲ್ಲಿ ಎಸ್ ಸಿ ಮಹಿಳೆಗೆ ಪ್ರಾರ್ಥನೆ ಮಾಡಲು ಅವಕಾಶ ನೀಡದ 20 ಅರ್ಚಕರು: ಪ್ರಕರಣ ದಾಖಲು
ಆಸ್ತಿ ವಿಚಾರ: ಹೆತ್ತ ತಾಯಿಗೆ ಕ್ರೂರವಾಗಿ ಥಳಿಸಿದ ಮಗ