ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ಸ್ವಜಾತಿಯವರಿಂದಲೇ ಯುವಕನ ಕುಟುಂಬಕ್ಕೆ ಬಹಿಷ್ಕಾರ
ಚಿಕ್ಕಮಗಳೂರು: ದಲಿತ ಯುವತಿಯನ್ನು ಬೇರೆ ಜಾತಿಯ ಯುವಕ ಮದುವೆಯಾಗಿದಕ್ಕೆ ಸ್ವಜಾತಿಯವರಿಂದ ಬಹಿಷ್ಕಾರ ಹಾಕಿಸಿಕೊಂಡ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಚಂದ್ರಶೇಖರ್ ಕುಟುಂಬಕ್ಕೆ ಸ್ವಜಾತಿ ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ವ್ಯಕ್ತಿಯು ದಲಿತ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದರು. ದಲಿತ ಯುವತಿಯನ್ನು ಮದುವೆಯಾಗಿದಕ್ಕೆ ಈ ದಂಪತಿಯ ಜೊತೆ ಗ್ರಾಮದಲ್ಲಿ ಯಾರು ಮಾತನಾಡುವಂತಿರಲಿಲ್ಲ. ಹಾಗೇನಾದರೂ ಅವರ ಜೊತೆ ಯಾರಾದರು ಮಾತನಾಡಿದ್ದಲ್ಲಿ 5 ಸಾವಿರ ರೂ. ದಂಡ ವಿಧಿಸಲಾಗುತ್ತಿತ್ತು. ದಂಪತಿ ಕುಟುಂಬವನ್ನು ಊರಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಕ್ಕೂ ಕೂಡಾ ಆಹ್ವಾನಿಸುವಂತಿಲ್ಲ ಎಂದು ಬಹಿಷ್ಕಾರ ಹಾಕಿದ್ದರು.
ಕೊನೆಗೆ ದಂಪತಿಯು ಹಿಂದೂ ಧರ್ಮದಿಂದ ಬೇಸತ್ತು, ಕ್ರೈಸ್ತ ಧರ್ಮಕ್ಕೆ ಮಂತಾತರಗೊಳ್ಳಲು ಚಿಂತಿಸಿದ್ದರು. ಕೊನೆಗೆ ಹಿಂದೂ ಧರ್ಮದ ಮುಖಂಡರು ಕುಟುಂಬದ ಮನವೊಲಿಸಿದ್ದು, ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿಗೆ ಬರುತ್ತೇನೆ ಅಂದ್ರೂ ಸಿಎಂ ಇಬ್ರಾಹಿಂ ಅವರನ್ನು ಸೇರಿಸಿಕೊಳ್ಳುವುದಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ
ಕಾರಿಗೆ ಗುಂಡು ಹಾರಿಸಿ ಓವೈಸಿಯ ಹತ್ಯೆಗೆ ಯತ್ನ!
ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್
ಗಂಡನನ್ನು ಆನ್ ಲೈನ್ ಸೈಟ್ ನಲ್ಲಿ ಮಾರಾಟಕ್ಕಿಟ್ಟ ಪತ್ನಿ!
ವೃದ್ಧೆ ಬದುಕಿರುವಾಗಲೇ ಮರಣ ಪತ್ರ ನೀಡಿದ ಅಧಿಕಾರಿಗಳು