ದಾರಿ ಮಧ್ಯೆ ಕತ್ತಿ ಬೀಸಿ ವ್ಯಕ್ತಿಯಿಂದ ಹುಚ್ಚಾಟ: ಗ್ಯಾರೇಜ್ ಮಾಲಿಕನಿಗೆ ಗಾಯ

ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಂಡ್ ಮೂಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.
ಅತಲ್ ಕುಲ್ಲು (30) ಬಂಧಿತ ವ್ಯಕ್ತಿ. ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದಾನೆ. ನಂತರ ಸಾರ್ವಜನಿಕರ ಜೊತೆ ಒರಟಾಗಿ ವರ್ತಿಸಿದ್ದು ವೆಂಕಪ್ಪ ಎಂಬ ಸ್ಥಳೀಯ ವ್ಯಕ್ತಿಗೆ ಬೆದರಿಸಿ, ಆತನ ಬಳಿ ಇರುವ ಕತ್ತಿಯನ್ನು ತೆಗೆದುಕೊಂಡು ಅದನ್ನು ಬೀಸುತ್ತ ಜನರಲ್ಲಿ ಆತಂಕ ಸೃಷ್ಠಿಸಿದ್ದಾನೆ.
ಅಷ್ಟೇ ಅಲ್ಲದೆ ಗ್ಯಾರೇಜ್ ಮಾಲೀಕ ಇಮ್ರಾನ್ ಎಂಬ ವ್ಯಕ್ತಿಗೆ ಕತ್ತಿ ತಾಗಿ ಸಣ್ಣಪುಟ್ಟ ಗಾಯಗಳಾಗಿವೆ. ಸಾರ್ವಜನಿಕರು ಅತನನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಈ ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದ. ಈತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka