ನಾವು ದಾರಿ ತಪ್ಪಿಲ್ಲ, ಸಿಎಂ ಯಡಿಯೂರಪ್ಪ ಮಾತು ತಪ್ಪಿದ್ದಾರೆ ಎಂದ ಸಾರಿಗೆ ಒಕ್ಕೂಟದ ಮುಖಂಡ | ಸಂಸದ ಪ್ರತಾಪ್ ಗೆ ತಿರುಗೇಟು - Mahanayaka

ನಾವು ದಾರಿ ತಪ್ಪಿಲ್ಲ, ಸಿಎಂ ಯಡಿಯೂರಪ್ಪ ಮಾತು ತಪ್ಪಿದ್ದಾರೆ ಎಂದ ಸಾರಿಗೆ ಒಕ್ಕೂಟದ ಮುಖಂಡ | ಸಂಸದ ಪ್ರತಾಪ್ ಗೆ ತಿರುಗೇಟು

prathap anand
08/04/2021

ಬೆಂಗಳೂರು: ಸಾರಿಗೆ ನೌಕರರನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದಾರಿತಪ್ಪಿಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಸದ ಪ್ರತಾಪ್ ಸಿಂಹಗೆ ಸಾರಿಗೆ ಒಕ್ಕೂಟದ ಮುಖಂಡ ಆನಂದ್ ತಿರುಗೇಟು ನೀಡಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ನಮ್ಮನ್ನು ಯಾರೋ ದಾರಿ ತಪ್ಪಿಸಲು ನಾವು ಅವಿದ್ಯಾವಂತರಲ್ಲ. ನಾವು ವಿದ್ಯಾವಂತರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದು,  ಪ್ರತಾಪ್ ಸಿಂಹ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬಹುದಿತ್ತಲ್ಲವೇ? ಎಂಬ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಿಪಕ್ಷ ಸ್ಥಾನದಲ್ಲಿದ್ದ ಯಡಿಯೂರಪ್ಪನವರು , ನಾವು ಅಧಿಕಾರಕ್ಕೆ ಬಂದರೆ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು ಎಂದು ಪ್ರತಾಪ್ ಸಿಂಹಗೆ ಅವರು ನೆನಪಿಸಿದರು.

ನಾವು ಅಧಿಕಾರಕ್ಕೆ ಬಂದರೆ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರು ಈಗ ಅಧಿಕಾರದಲ್ಲಿದ್ದಾರೆ. ಆದರೆ ಈಗ ಅವರು ಕೊಟ್ಟು ಮಾತನ್ನು ಉಳಿಸಿಕೊಳ್ಳದೇ ಆರನೇ ವೇತನ ಜಾರಿ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ