ಕ್ರೈಸ್ತ ಧಾರ್ಮಿಕ ಸಮಾರಂಭದಲ್ಲಿ ಕಾಲ್ತುಳಿತ; 29 ಮಂದಿ ಸಾವು

ಮೊನ್ವೋರಿಯಾ: ಲೈಬೀರಿಯಾದ ರಾಜಧಾನಿಯಲ್ಲಿ ಕ್ರೈಸ್ತ ಧಾರ್ಮಿಕ ಸಮಾರಂಭವೊಂದರಲ್ಲಿ ಬುಧವಾರ ರಾತ್ರಿ ಕಾಲ್ತುಳಿತ ಸಂಭವಿಸಿ 11 ಮಂದಿ ಮಕ್ಕಳು, ಒಬ್ಬರು ಗರ್ಭಿಣಿ ಸಹಿತ 29 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.
ಚಾಕು, ಚೂರಿ ಹಿಡಿದಿದ್ದ ಕೊಲೆಗಡುಕರ ಗುಂಪೊಂದು ದಾಳಿ ನಡೆಸಿದ್ದರಿಂದ ಜನ ಭಯಗೊಂಡು ಚೆಲ್ಲಾಪಿಲ್ಲಿಯಾಗಿ ಓಡಿದಾಗ ಕಾಲ್ತುಳಿತ ಸಂಭವಿಸಿತು. ಘಟನೆಯ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ.
ಮೊನ್ವೋರಿಯಾ ಮತ್ತು ಇತರ ನಗರಗಳಲ್ಲಿ ಬೀದಿ ಕಾಳಗಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿದ್ದು, ಅದರ ಭಾಗವಾಗಿ ಈ ದಾಳಿಯೂ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ
ಲಾಹೋರ್ ಮಾರುಕಟ್ಟೆಯಲ್ಲಿ ಭಾರೀ ಸ್ಫೋಟ; 3 ಸಾವು, 20 ಮಂದಿಗೆ ಗಾಯ
ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಡಿಓ ಬಂಧನ
2022ರ ಆಸ್ಕರ್ ಪ್ರಶಸ್ತಿಗೆ ತಮಿಳು ಚಿತ್ರ ‘ಜೈ ಭೀಮ್’ ಆಯ್ಕೆ
ಖ್ಯಾತ ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು