ದರೋಡೆ ಯತ್ನ: ಮೂವರು ಆರೋಪಿಗಳ ಬಂಧನ

arrest
05/03/2022

ಬೆಂಗಳೂರು: ದರೋಡೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಉಲ್ಲಾಸ್ ಅಲಿಯಾಸ್​ ಪಾಲಿ, ರಘುನಾಯಕ್ ಅಲಿಯಾಸ್ 220 ಹಾಗೂ ನಂದನ ಅಲಿಯಾಸ್​ ನಂದು ಬಂಧಿತ ಆರೋಪಿಗಳಾಗಿದ್ದಾರೆ. ಒಟ್ಟು ಏಳು ಆರೋಪಿಗಳು ಸೇರಿ ದರೋಡೆಗೆ ಹೊಂಚು ಹಾಕುತ್ತಿದ್ದು, ಪೊಲೀಸರು ದಾಳಿ ನಡೆಸಿದಾಗ ನಾಲ್ವರು ಪರಾರಿಯಾಗಿದ್ದಾರೆ. ಆರೋಪಿಗಳು ಬೈಕ್​ ನಲ್ಲಿ ಹಗಲು ಸುತ್ತಾಡಿ ಬೀಗ ಹಾಕಿದ ಮನೆಗಳನ್ನೇ ಗುರುತಿಸುತ್ತಿದ್ದರು. ಅಲ್ಲದೆ, ರಾತ್ರಿ ವೇಳೆ ಗುರುತಿಸಿದ ಮನೆಗಳನ್ನು ದೋಚುತ್ತಿದ್ದರು ಎನ್ನಲಾಗಿದೆ.

ಇದೀಗ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 10 ಲಕ್ಷ ರೂ. ಮೌಲ್ಯದ 220 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಾಕಾಸ್ತ್ರ ಮತ್ತು ಬೈಕ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಾಮಾಜಿಕ ಹೋರಾಟಗಾರ, ನಟ ಚೇತನ್‌ ಗೆ ನೀಡಿದ್ದ ಗನ್‌ ಮ್ಯಾನ್ ಹಿಂಪಡೆದ ಸರಕಾರ

ಮೀನು ವ್ಯಾಪಾರಿ ಮೇಲೆ ತಲವಾರಿನಿಂದ ದಾಳಿ: 2 ಲಕ್ಷ ರೂ. ನಗದು ದರೋಡೆ

ಉಕ್ರೇನ್‌ ನಲ್ಲಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಣೆ

ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

Exit mobile version