ದರ್ಶನ್ ಡೆವಿಲ್, ಧ್ರುವ ಸರ್ಜಾ KD ಎರಡು ಚಿತ್ರ ಮುಖಾಮುಖಿಯಾಗಲಿದೆ: ಯಾವಾಗ?

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಸಿನಿಮಾಗಳೇ ಬಿಡುಗಡೆಯಾಗುತ್ತಿಲ್ಲ ಎನ್ನುವ ಮಾತುಗಳು ಇತ್ತೀಚೆಗೆ ಕೇಳಿ ಬಂತಿತ್ತು. ಆದ್ರೆ ಇದೀಗ ಎರಡು ಚಿತ್ರಗಳು ಬ್ಯಾಕ್ ಟು ಬ್ಯಾಕ್ ಬಿಡುಗಡೆಗೆ ಸಿದ್ಧವಾಗಿದೆ.
ಧ್ರುವ ಸರ್ಜಾ ನಟನೆಯ KD ಹಾಗೂ ದರ್ಶನ್ ನಟನೆಯ ಡೆವಿಲ್ ಒಂದರ ಹಿಂದೊಂದರಂತೆ ಬಿಡುಗಡೆಯಾಗಲಿದ್ದು, ಬಾಕ್ಸ್ ಆಫೀಸ್ ನಲ್ಲಿ ಎರಡು ಚಿತ್ರಗಳು ಮುಖಾಮುಖಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಡಿಸೆಂಬರ್ ನಲ್ಲಿ ಧ್ರುವ ಸರ್ಜಾ ನಟನೆಯ KD ರಿಲೀಸ್:
ಧ್ರುವ ಸರ್ಜಾ ಮತ್ತು ಪ್ರೇಮ್ ಕಾಂಬಿನೇಷ ನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಕೆಡಿ ಸಿನಿಮಾ, ಈಗಾಗಲೇ ಶೂಟಿಂಗ್ ಹಂತದಲ್ಲಿದೆ. ಕೆವಿಎನ್ ಪ್ರೊಡಕ್ಷನ್ಸ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಕನ್ನಡದ ಸ್ಟಾರ್ ನಟರ ದಂಡೇ ಇದೆ. ರೆಟ್ರೋ ಸ್ಟೈಲ್ ನಲ್ಲಿಯೂ ಈ ಸಿನಿಮಾ ಮೂಡಿಬರುತ್ತಿರುವುದರಿಂದ ಕುತೂಹಲವೂ ದುಪ್ಪಟ್ಟಾಗಿದೆ. ಇದೀಗ ಇದೇ ಸಿನಿಮಾ ತಂಡ, ಇದೇ ವರ್ಷದ ಡಿಸೆಂಬರ್ ನಲ್ಲಿ ನಾವೂ ಚಿತ್ರಮಂದಿರಕ್ಕೆ ಬರ್ತಿವಿ ಅನ್ನೋ ಸುಳಿವು ನೀಡಿದೆ. ಕೆಡಿ ಚಿತ್ರದ ಅತಿ ದೊಡ್ಡ ಆರ್ಕೆಸ್ಟ್ರಾ ಝಲಕ್ ರಿಲೀಸ್ ಮಾಡಿ ಈ ವಿಚಾರವನ್ನು ತಿಳಿಸಿದೆ. “ಯುದ್ಧಕ್ಕೆ ರೆಡಿಯಾಗ್ತಿದ್ದೀವಿ. ಇದೇ ಡಿಸೆಂಬರ್‌ನಲ್ಲಿ ವಾರ್ ಬಿಗಿನ್ಸ್” ಎಂದಿದ್ದಾರೆ ಪ್ರೇಮ್.
ದರ್ಶನ್ ಡೆವಿಲ್ ಸಹ ಡಿಸೆಂಬರ್‌ನಲ್ಲೇ ಬಿಡುಗಡೆ
ಇತ್ತೀಚೆಗಷ್ಟೇ ಡೆವಿಲ್ ಸಿನಿಮಾದ ಬಿಡುಗಡೆಯ ದಿನಾಂಕವನ್ನು ನಟ ದರ್ಶನ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಈ ವರ್ಷಾಂತ್ಯಕ್ಕೆ ಮತ್ತೊಮ್ಮೆ ಚಿತ್ರಮಂದಿರಕ್ಕೆ ಬರಲು ದರ್ಶನ್ ರೆಡಿಯಾಗಿದ್ದಾರೆ. ಹಾಗಾದರೆ, ಬಿಡುಗಡೆಯ ದಿನ ಯಾವಾಗ? ಇದೇ ವರ್ಷದ ಕ್ರಿಸ್ ಮಸ್ ಗೆ ಡೆವಿಲ್ ಸಿನಿಮಾ ಬಿಡುಗಡೆ ಆಗಲಿದೆ ಎಂದು ದರ್ಶನ್ ಪೋಸ್ಟ್ ಹಾಕುತ್ತಿದ್ದಂತೆ, ಫ್ಯಾನ್ಸ್ ವಲಯದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. “ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ — ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ” ಎಂದಿದ್ದರು ದರ್ಶನ್.
ಶ್ರೀ ಜೈಮಾತಾ ಕಂಬೈನ್ಸ್ ಮತ್ತು ವೈಷ್ಣೋ ಸ್ಟುಡಿಯೋ ಬ್ಯಾನರ್‌ನಲ್ಲಿ ಜೆ ಜಯಮ್ಮ ಡೆವಿಲ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಪ್ರಕಾಶ್ ವೀರ್ (ಮಿಲನಾ ಪ್ರಕಾಶ್) ಈ ಸಿನಿಮಾಕ್ಕೆ ನಿರ್ದೇಶನ ಮಾಡುತ್ತಿದ್ದರೆ, ಅಜನೀಶ್ ಲೋಕನಾಥ್ ಅವರ ಸಂಗೀತ, ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ, ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಈ ಸಿನಿಮಾಕ್ಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068