ರೇಣುಕಾಸ್ವಾಮಿ ಕೇಸ್: ದರ್ಶನ್—ಪವಿತ್ರಾ ಜಾಮೀನು ಸದ್ಯಕ್ಕಿಲ್ಲ | ಕೋರ್ಟ್ ನಲ್ಲಿ ಏನು ನಡೆಯಿತು?
23/09/2024
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್—ಪವಿತ್ರಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಮತ್ತೆ ಮುಂದೂಡಿದೆ.
ಸೆಪ್ಟಂಬರ್ 27ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು ಎಸ್ ಪಿಪಿ ಕಾಲಾವಕಾಶ ಕೇಳಿದ ಹಿನ್ನಲೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡಗೆ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದೇ ನಡೆದಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿದ್ದಾರೆ.