ಕಾಫಿನಾಡಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನ - Mahanayaka
11:14 PM Tuesday 24 - December 2024

ಕಾಫಿನಾಡಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನ

dattamala
04/11/2024

ಚಿಕ್ಕಮಗಳೂರು: ಕಾಫಿನಾಡಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನ ಸಂಭ್ರಮದಿಂದ ನಡೆಯಲಿದೆ. ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಈ ಬಾರಿ 21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಕರ್ನಾಟಕದ ಅಯೋಧ್ಯೆ ದತ್ತಪೀಠದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನಕ್ಕೆ ಮಾಲಾಧಾರಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಚಿಕ್ಕಮಗಳೂರು ನಗರದ ಶಂಕರಮಠದಲ್ಲಿ ಮಾಲಾಧಾರಣೆ ನಡೆಯಿತು. ಇಂದಿನಿಂದ ನವೆಂಬರ್ 10 ವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ.

ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರು ಮಾಲಾಧಾರಣೆ ಮಾಡಿದರು. ಹಿಂದೂಗಳಿಗೆ ದತ್ತಪೀಠ ನೀಡಬೇಕು ಎಂಬ ಪ್ರಮುಖ ಆಗ್ರಹದೊಂದಿಗೆ ದತ್ತಮಾಲಾ ಅಭಿಯಾನ ನಡೆಯಿತು.

ನವೆಂಬರ್ 10ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ನಡೆಯಲಿದೆ, 2 ದಶಕದ ನಂತರ ಬಿಜೆಪಿ, ಹಿಂದೂ ಪರ ಸಂಘಟನೆಯಿಂದ ಈ ಬಾರಿಯ ಅಭಿಯಾನಕ್ಕೆ ಸಾಥ್ ನೀಡಲಾಗಿದೆ. ಒಗ್ಗಟ್ಟಿನ ಮಂತ್ರದೊಂದಿಗೆ ಈ ಬಾರಿ ನಡೆಯಲಿರುವ ದತ್ತಮಾಲಾ ಅಭಿಯಾನ ನಡೆದಿದೆ. ಜಿಲ್ಲೆ ಸೇರಿ ರಾಜ್ಯಾದ್ಯಂತ ಇಂದು ದತ್ತಮಾಲಾಧಾರಣೆ ನಡೆಯಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ