ಅತ್ತೆ ಮಾವನ ಮೇಲಿನ ಸಿಟ್ಟಿನಿಂದ 40 ಅಡಿಕೆ ಮರಗಳನ್ನು ಕಡಿದು ಹಾಕಿದ ಸೊಸೆ!

ದಾವಣಗೆರೆ: ಅತ್ತೆ ಮಾವನ ಮೇಲಿನ ಸಿಟ್ಟಿಗೆ ಸೊಸೆಯೊಬ್ಬಳು 40 ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮಾವ ಚಿದಾನಂದಪ್ಪ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿ ರೂಪಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿದಾನಂದಸ್ವಾಮಿ, ಶಿವನಾಗಮ್ಮ ಅವರ ಜೇಷ್ಠ ಪುತ್ರ ಕುಮಾರಸ್ವಾಮಿಯ ಪತ್ನಿ ರೂಪಾ ಕೆಲ ವರ್ಷಗಳಿಂದ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದಳು. ಆದರೆ ಅತ್ತೆ-ಮಾವ ಆಸ್ತಿಯಲ್ಲಿ ಪಾಲು ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ.
ಸೊಸೆ ರೂಪಾ ನಮ್ಮನ್ನು ಸರಿಯಾಗಿ ನೋಡಿಕೊಳ್ಳದೆ, ಹಲ್ಲೆ ಮಾಡುತ್ತಿದ್ದಾಳೆ. ನಮ್ಮ ಬಳಿ 8 ಲಕ್ಷ ರೂಪಾಯಿ ಪಡೆದು ಮನೆ ಕಟ್ಟಿಸಿಕೊಂಡಿದ್ದಾಳೆ ಎಂದು ಮಾವ ಚಿದಾನಂದಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth