ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿಕೊಂದ ಪಾಪಿ ತಂದೆ!

ದಾವಣಗೆರೆ: ತಂದೆಯೋರ್ವ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಗೈದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಮಕ್ಕಳ ಬಾಯಿಗೆ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ.
ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಮೃತಪಟ್ಟ ಮಕ್ಕಳಾಗಿದ್ದಾರೆ. 35 ವರ್ಷದ ಅಮರ ಕಿತ್ತೂರು ತನ್ನ ಮಕ್ಕಳನ್ನೇ ಹತ್ಯೆ ಮಾಡಿದ ತಂದೆಯಾಗಿದ್ದಾನೆ. ಈತ ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಆರೋಪಿಯು ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು ತನ್ನ ಪತ್ನಿ ಜಯಲಕ್ಷ್ಮಿ ತವರು ಮನೆ ವಿಜಯಪುರಕ್ಕೆ ಹೋಗಿದ್ದಳು. ಇನ್ನು ಅಮರ ತನ್ನ ಮಕ್ಕಳನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಕೃತ್ಯದ ಬಳಿಕ ಮಕ್ಕಳನ್ನು ತಾನೇ ಹತ್ಯೆ ಮಾಡಿರುವುದಾಗಿ ಆರೋಪಿಯು ಒಪ್ಪಿಕೊಂಡಿದ್ದಾನೆ. ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw