ಬಾಲಕರನ್ನು ಕಟ್ಟಿ ಹಾಕಿ, ಥಳಿಸಿ ಗುಪ್ತಾಂಗಕ್ಕೆ ಇರುವೆ ಬಿಟ್ಟ ಪಾಪಿಗಳು!

ದಾವಣಗೆರೆ: ಕಳ್ಳತನದ ಆರೋಪ ಹೊರಿಸಿ ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿ ಗುಪ್ತಾಂಗಕ್ಕೆ ಕಟ್ಟಿರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ನಡೆದಿದ್ದು, ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿಯ ಅಸ್ತಾಪನಹಳ್ಳಿಯ ಈ ಘಟನೆ ನಡೆದಿದೆ. ಹಕ್ಕಿಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಸಮುದಾಯದ 10ರಿಂದ 15 ಜನರ ಗುಂಪು ಹಲ್ಲೆ ನಡೆಸಿದ್ದು, ದೊಣ್ಣೆ ಡ್ರಿಪ್ ಪೈಪ್ ನಿಂದ ಯುವಕರು ಹಲ್ಲೆ ನಡೆಸುತ್ತಿದ್ದರೆ, ಬಾಲಕರು ನೋವಿನಿಂದ ಚೀರಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ತಿಂಗಳ ಹಿಂದೆ ಈ ದೌರ್ಜನ್ಯ ನಡೆಸಲಾಗಿದೆ ಎಂದು ಹೇಳಲಾಗಿದೆ. ಸದ್ಯ ವಿಡಿಯೋ ವೈರಲ್ ಆಗಿರುವುದರಿಂದ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಅಜ್ಜ ನೀಡಿರುವ ದೂರಿನ ಮೇರೆಗೆ 9 ಯುವಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈಗಾಗಲೇ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: