ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಷಣ
ಇಂದು ದೇಶದ ಮೊದಲ ಪ್ರಧಾನಿ ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಯಂದು ನಾವು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ನೆಹರೂ ಅವರ ಆಚಾರ ವಿಚಾರಗಳ ಬಗ್ಗೆ ದೊಡ್ಡ ಅಧ್ಯಯನ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನೆಹರೂ ಅವರ ಪಂಚ ವಾರ್ಷಿಕ ಯೋಜನೆ ಇಡೀ ದೇಶದಲ್ಲಿ ಸಾರ್ವಜನಿಕ ಉದ್ದಿಮೆಗಳ ಸ್ಥಾಪನೆ, ದೇಶದಲ್ಲಿ ಹಸಿವು ನೀಗಿಸಿ, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ತೆಗೆದುಕೊಂಡ ನಿರ್ಧಾರ, ವಿದೇಶಾಂಗ ನೀತಿಗಳು, ದೇಶದ ಸಂವಿಧಾನಕ್ಕೆ ಕೊಟ್ಟ ಭದ್ರ ಬುನಾದಿ ಮರೆಯಲು ಸಾಧ್ಯವಿಲ್ಲ ಎಂದರು.
ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದೇ ರೀತಿ ನೆಹರೂ ದೇಶಕ್ಕೆ ದೊಡ್ಡ ಇತಿಹಾಸ ಕೊಟ್ಟಿದ್ದು, ನಾವು ಅವರ ಹಾದಿಯಲ್ಲಿ ಹೆಜ್ಜೆ ಹಾಕಬೇಕಿದೆ. ಆಮೂಲಕ ದೇಶವನ್ನು ಅಭಿವೃದ್ಧಿಶೀಲ ದೇಶವನ್ನಾಗಿ ಮಾಡಿದ್ದೇವೆ ಎಂದರು.
ನೆಹರೂ ಅವರು ಪಾಲಿಕೆ ಅಧ್ಯಕ್ಷ ಸ್ಥಾನದಿಂದ ದೇಶದ ಪ್ರಧಾನಮಂತ್ರಿ ಹುದ್ದೆವರೆಗೂ ಬೆಳೆದ ಧೀಮಂತ ನಾಯಕರು. ಈ ಸಂದರ್ಭದಲ್ಲಿ ಪಕ್ಷದ ಪರವಾಗಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw