ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ
ಗುಂಡ್ಲುಪೇಟೆ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯೊಂದರ ಮೃತ ದೇಹ ಪತ್ತೆಯಾಗಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ನಡೆದಿದೆ.
ಹುಲಿಯು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ಇನ್ನೂ ಕೂಡ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರವಷ್ಟೆ ಕಾರಣ ಗೊತ್ತಾಗಲಿದೆ.
ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ರೈತರೊಬ್ಬರು ಹೋಗಿದ್ದಾಗ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ನಂತರ ರೈತರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಹಾಯಕ ಅರಣ್ಯಾಧಿಕಾರಿ ರವೀಂದ್ರ, ಆರ್ ಎಫ್ ಓ ಶ್ರೀನಿವಾಸ್ ಹಾಗೂ ತಂಡದವರು ಪರಿಶೀಲನೆ ನಡೆಸಿದ್ದು, ಹುಲಿಯ ಮೃತ ದೇಹ ಕೆರೆಯಿಂದ ಮೇಲೆತ್ತಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು:
ಚೌಡಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ, ಚಿರತೆ, ಕಾಡಾನಗಳು ನಿರಂತರವಾಗಿ ಜಾನುವಾರು ಹಾಗೂ ರೈತರ ಫಸಲಿನ ಮೇಲೆ ದಾಳಿ ನಡೆಸಿ ನಾಶಗೊಳಿಸಿದ್ದವು. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ರೈತರು ಹಲವು ಬಾರಿ ದೂರು ನೀಡುತ್ತಿದ್ದರೂ ಸಹ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿರಲಿಲ್ಲ. ಆದರೆ ಇದೀಗ ಕೆರೆಯಲ್ಲಿ ಹುಲಿ ಮೃತ ದೇಹ ಪತ್ತೆಯಾಗಿರುವ ಕಾರಣ ಸ್ಥಳಕ್ಕಾಗಿಮಿಸಿದ ಅರಣ್ಯಾಧಿಕಾರಿಗಳನ್ನು ರೈತರ ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw