ಬಂಟ್ವಾಳದ ಯುವಕನ ಮೃತದೇಹ ಚಾರ್ಮಾಡಿ ಘಾಟ್ ದೇವರ ಮನೆ ರಸ್ತೆಯಲ್ಲಿ ಪತ್ತೆ: ಮಾದಕ ವ್ಯಸನಿಗಳ ತಂಡದಿಂದ ಹತ್ಯೆ?
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಮೂಡಿಗೆರೆಯ ಚಾರ್ಮಾಡಿ ಘಾಟ್ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ರಸ್ತೆ ತಿರುವು ಬಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಸವಾದ್ (35) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದ. ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.
ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಂತಕರು ಕಾವಳಕಟ್ಟೆ — ವಗ್ಗ ಮೂಲದ ಪೆಡ್ಲರ್ ತಂಡದವರು ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದ್ದು, ಶೋಧಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ:
ದೇವರುಮನೆ ಗುಡ್ಡದಲ್ಲಿ ಯುವಕನ ಮೃತದೇಹ ಪತ್ತೆ: ಹತ್ಯೆ ಮಾಡಿ ಎಸೆದಿರುವ ಶಂಕೆ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw