ಬಿಜೆಪಿ ಮುಖಂಡನ ಮೃತದೇಹ ಪತ್ತೆ: ಸಾವಿಗೂ ಮೊದಲು ನಡೆದಿತ್ತಾ ಹೊಡೆದಾಟ?

ಕಾರು ಚಾಲಕನ ಮೃತದೇಹ ಪತ್ತೆಯಾದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಜನಾರ್ದನ ಪೂಜಾರಿ (45) ಎಂಬುವವರ ಮೃತದೇಹ ನಗರದ ನೆಹರೂ ಮೈದಾನದ ಬಳಿ ಪತ್ತೆಯಾಗಿದೆ.
ಜನಾರ್ದನ ಪೂಜಾರಿಯ ಜತೆ ಕೆಲವರು ಹೊಡೆದಾಟ ನಡೆಸಿದ್ದು, ಬಳಿಕ ಅವರ ಮೃತದೇಹ ನೆಹರೂ ಮೈದಾನದಲ್ಲಿ ಕಂಡು ಬಂದಿದೆ ಎನ್ನಲಾಗಿದೆ. ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.
ಜನಾರ್ದನ ಪೂಜಾರಿ ಬಿಜೆಪಿಯ ಅಮ್ಮುಂಜೆ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದು, ಪ್ರಸ್ತುತ ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.
ಜನಾರ್ದನ ಪೂಜಾರಿಯ ಮೃತದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw