ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ - Mahanayaka
11:32 PM Tuesday 10 - December 2024

ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

gangolli
02/12/2022

ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕಾ ಬಂದರು ಬಳಿ ಬೋಟ್ ನಿಂದ ಮೀನು ಖಾಲಿ ಮಾಡುವಾಗ ಆಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಮೃತರನ್ನು ಒರಿಸ್ಸಾ ಮೂಲದ ಪ್ರಮೋದ ಮಿನ್ಜ್(32) ಎಂದು ಗುರುತಿಸಲಾಗಿದೆ. ಇವರು ಗಂಗೊಳ್ಳಿ ಮೂಲದ ಪ್ರಭಾಕರ ಖಾರ್ವಿ ಎಂಬವರ ಶ್ರೀ ಯಕ್ಷೇಶ್ವರಿ ಎಂಬ ಬೋಟಿನಲ್ಲಿ ಇತರ ಮೀನುಗಾರರೊಂದಿಗೆ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದರು.

ಮೀನುಗಾರಿಕೆ ನಡೆಸಿ ವಾಪಾಸ್ಸು ನ.30ರಂದು ಗಂಗೊಳ್ಳಿ ಬಂದರು ಬಳಿ ಪಂಚಗಂಗಾವಳಿ ನದಿಯಲ್ಲಿ ಬೋಟನ್ನು ನಿಲ್ಲಿಸಿ ರಾತ್ರಿ 9:30ಕ್ಕೆ ಬೋಟಿನಿಂದ ಮೀನು ಖಾಲಿ ಮಾಡುತ್ತಿರುವಾಗ ಪ್ರಮೋದ ಮಿನ್ಜ್ ಆಕಸ್ಮಿಕವಾಗಿ ಆಯಾತಪ್ಪಿ ನದಿಯ ನೀರಿಗೆ ಬಿದ್ದು ಕಾಣೆಯಾಗಿದ್ದರು.

ಸತತ ಹುಡುಕಾಟದ ಬಳಿಕ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ